2026-06-03 11:42:59

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕಾರ; ಇಂದಿನಿಂದ ಹೊಸ ಶೆಕೆ ಆರಂಭ|Speed News Kannada

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕಾರ; ಇಂದಿನಿಂದ ಹೊಸ ಶೆಕೆ ಆರಂಭ|Speed News Kannada

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇಂದು ಸಂಜೆ 4.05ಕ್ಕೆ ಲೋಕಭವನದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಥ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನೂ ನುಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮುಖಂಡರಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೇರಳ ಸಿಎಂ  ವಿ.ಡಿ.ಸತೀಶನ್, ತೆಲಂಗಾಂಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಸುಖವೀಂದರ್ ಸಿಂಗ್ ಸುಖು ಸೇರಿದಂತೆ ಎಐಸಿಸಿ ಪ್ರಮುಖ ನಾಯಕರು ಭಾಗವಹಿಸಲಿದ್ದರು.

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಹಾಗೂ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟರಾದ ಜಯಮಾಲಾ ಮತ್ತು ಶಿವರಾಜ್‌ಕುಮಾರ್ ಅವರೂ ಹಾಜರಿದ್ದರು.

ಪ್ರಮಾಣ ವಚನಕ್ಕೂ ಮುನ್ನ ಶಿವಕುಮಾರ್‌ ಎಲ್ಲರ ಬಳಿಯೂ ತೆರಳಿ ಅಭಿನಂದಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.