2026-06-08 07:51:01

DK Shivakumar visits Kamakhya Temple with MP Priyanka Gandhi | ಸಂಸದೆ ಪ್ರಿಯಾಂಕಾ ಗಾಂಧಿ ಜತೆ ಕಾಮಾಕ್ಯ ದೇಗುಲಕ್ಕೆ ಡಿ.ಕೆ ಶಿವಕುಮಾರ್ ಭೇಟಿ | Speed News Kannada

DK Shivakumar visits Kamakhya Temple with MP Priyanka Gandhi | ಸಂಸದೆ ಪ್ರಿಯಾಂಕಾ ಗಾಂಧಿ ಜತೆ ಕಾಮಾಕ್ಯ ದೇಗುಲಕ್ಕೆ ಡಿ.ಕೆ ಶಿವಕುಮಾರ್ ಭೇಟಿ | Speed News Kannada

ಗುವಾಹಟಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರ ಜತೆಗೂಡಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವಿಷಯವನ್ನು ಶಿವಕುಮಾರ್‌ ಅವರು ಎಕ್ಸ್‌ ನಲ್ಲಿ ಹಂಚಿಕೊಂಡಿದ್ದಾರೆ.
ಪ್ರಿಯಾಂಕಾ ಗಾಂಧಿ ಅವರೊಂದಿಗೆ ಇಂದು ಅಸ್ಸಾಂನ ಗುವಾಹಟಿಯಲ್ಲಿರುವ ಪವಿತ್ರ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದೆವು. ಮಾತೆಯು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿ ನೀಡಲಿ. ಜೈ ಮಾ ಕಾಮಾಖ್ಯ’ ಎಂದು ಪೋಸ್ಟ್ ಮಾಡಿದ್ದಾರೆ.
ದೇಶದ 51 ಶಕ್ತಿ ಪೀಠಗಳಲ್ಲಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲವು ಒಂದಾಗಿದೆ. ಕೆಲವೇ ತಿಂಗಳಲ್ಲಿ ಅಸ್ಸಾಂ ವಿಧಾನಸಭಾ ಚುನಾವಣೆ ನಡೆಯಲಿದ್ದು ಶಿವಕುಮಾರ್‌ ಅವರಿಗೆ ಉಸ್ತುವಾರಿ ವಹಿಸಲಾಗಿದೆ. ಇಂದು ಅಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಭಾಗವಹಿಸಲು ಇವರು ತೆರಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.