2026-07-11 11:35:55

DK | ಪೊಲೀಸ್ ಇಲಾಖೆಗೆ ಹೊಸ ಬಲ ಸಿಎಂ ಡಿಕೆಶಿಯಿಂದ ಫೋರೆನ್ಸಿಕ್ ವ್ಯಾನ್ ಗಳ ಲೋಕಾರ್ಪಣೆ | SNK

DK | ಪೊಲೀಸ್ ಇಲಾಖೆಗೆ ಹೊಸ ಬಲ ಸಿಎಂ ಡಿಕೆಶಿಯಿಂದ ಫೋರೆನ್ಸಿಕ್ ವ್ಯಾನ್ ಗಳ ಲೋಕಾರ್ಪಣೆ | SNK

ಬೆಂಗಳೂರು: ರಾಜ್ಯದ ಆಂತರಿಕ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಪೊಲೀಸ್ ಇಲಾಖೆಗೆ ಸರ್ಕಾರ ತಾಂತ್ರಿಕವಾಗಿ ಮತ್ತಷ್ಟು ಬಲ ತುಂಬಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಆವರಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲಾ ಘಟಕಗಳಿಗಾಗಿ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳು ಹಾಗೂ 75 ಹೊಸ ಬೊಲೆರೋ ವಾಹನಗಳನ್ನು ಸಿಎಂ ಡಿಕೆ ಶಿವಕುನಾರ್ ಲೋಕಾರ್ಪಣೆ ಮಾಡಿದ್ದಾರೆ. ಈ ನೂತನ ಸಾರಿಗೆ ಸೌಲಭ್ಯಗಳು ಅಪರಾಧ ಪತ್ತೆ ಹಚ್ಚುವ ಪ್ರಕ್ರಿಯೆಯನ್ನು ಗಣನೀಯವಾಗಿ ವೇಗಗೊಳಿಸಲಿವೆ. 

ನಮ್ಮ ದೇಶದ ಗಡಿಯನ್ನು ಯೋಧರು ಕಾಯುತ್ತಿದ್ದರೆ, ರಾಜ್ಯದ ಆಂತರಿಕ ಶಾಂತಿಯನ್ನು ಪೊಲೀಸರು ಕಾಪಾಡುತ್ತಿದ್ದಾರೆ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಶ್ಲಾಘಿಸಿದರು. ವಿಶೇಷವಾಗಿ ಮಾದಕ ವಸ್ತು ಜಾಲದ ವಿರುದ್ಧದ ಹೋರಾಟದಲ್ಲಿ ಸಾವಿರಾರು ಡ್ರಗ್ ಪೆಡ್ಲರ್‌ಗಳನ್ನು ಸದೆಬಡಿದು ಅಪ್ರತಿಮ ದಾಖಲೆ ನಿರ್ಮಿಸಿರುವ ಇಲಾಖೆಯ ದಕ್ಷತೆಯನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಹಗಲಿರುಳು ಶ್ರಮಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಿತರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿರುತ್ತದೆ ಎಂಬ ಭರವಸೆ ನೀಡಿದ್ದಾರೆ.

ಹೀಗಾಗಿ ಸಾರ್ವಜನಿಕರಲ್ಲಿ ಇಲಾಖೆಯ ಬಗ್ಗೆ ಇನ್ನಷ್ಟು ವಿಶ್ವಾಸ ಮೂಡುವಂತೆ ಕರ್ತವ್ಯ ನಿರ್ವಹಿಸಲು ಕರೆ ನೀಡಿದ ಈ ಔಪಚಾರಿಕ ಸಭೆಯಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದು, ಇಲಾಖೆಯ ಹೊಸ ಯಾನಕ್ಕೆ ಶುಭ ಹಾರೈಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.