2026-06-08 03:54:04

DMDK in alliance with DMK | ತಮಿಳುನಾಡು ವಿಧಾನಸಭೆ ಚುನಾವಣೆ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡ ಡಿಎಂಡಿಕೆ | Speed News Kannada

DMDK in alliance with DMK | ತಮಿಳುನಾಡು ವಿಧಾನಸಭೆ ಚುನಾವಣೆ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡ ಡಿಎಂಡಿಕೆ | Speed News Kannada

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಡಿಎಂಡಿಕೆ ಪಕ್ಷವು ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದೆ. ಇಂದು ಡಿಎಂಕೆ ಅಧ್ಯಕ್ಷ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಸಮ್ಮುಖದಲ್ಲಿ ಡಿಎಂಡಿಕೆ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದೀಗ ಡಿಎಂಡಿಕೆ ಅಧಿಕೃತವಾಗಿ ಡಿಎಂಕೆ ನೇತೃತ್ವದ ‘ಜಾತ್ಯತೀತ ಪ್ರಗತಿಪರ ಮೈತ್ರಿಕೂಟ’ಕ್ಕೆ (ಎಸ್‌ಪಿಎ) ಸೇರ್ಪಡೆಗೊಂಡಿದೆ.
ದಿವಂಗತ ನಟ ವಿಜಯಕಾಂತ್ ಅವರು ಡಿಎಂಡಿಕೆ ಪಕ್ಷವನ್ನು ಸ್ಥಾಪಿಸಿದ್ದರು.
ನನ್ನ ಆತ್ಮೀಯ ಗೆಳೆಯ ವಿಜಯಕಾಂತ್ ಸ್ಥಾಪಿಸಿದ್ದ ಡಿಎಂಡಿಕೆ ಪಕ್ಷವು ಇಂದು ಜಾತ್ಯತೀತ ಪ್ರಗತಿಪರ ಒಕ್ಕೂಟಕ್ಕೆ ಸೇರ್ಪಡೆಗೊಂಡಿರುವುದು ಸಂತೋಷವನ್ನುಂಟು ಮಾಡಿದೆ. ವಿಜಯಕಾಂತ್ ಸ್ಥಾಪಿಸಿದ್ದ ಪಕ್ಷವನ್ನು ಸಹೋದರಿ ಪ್ರೇಮಲತಾ ವಿಜಯಕಾಂತ್ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಸ್ಟಾಲಿನ್‌ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.
ದ್ರಾವಿಡ ಮಾದರಿ ಆಳ್ವಿಕೆಯನ್ನು ಮುಂದುವರಿಸಲು ಮತ್ತು ತಮಿಳುನಾಡನ್ನು ಎಲ್ಲಾ ರೀತಿಯಲ್ಲಿ ಪ್ರಗತಿಯ ಪಥದಲ್ಲಿ ಮುನ್ನಡೆಸಲು ಒಟ್ಟಾಗಿ ಸಾಗೋಣ ಎಂದು ಸ್ಟಾಲಿನ್‌ ಕರೆ ನೀಡಿದ್ದಾರೆ.
2021ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಡಿಕೆ ಪಕ್ಷವು ಟಿಟಿವಿ ದಿನಕರನ್ ಅವರ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಜೊತೆ ಮೈತ್ರಿ ಮಾಡಿಕೊಂಡಿದ್ದರೆ 2024ರ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿತ್ತು. ಇದೀಗ ಡಿಎಂಕೆ ಜತೆ ಕೈಜೋಡಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.