2026-05-08 05:27:01

dmk comeout of india blioc; request for separate seat arrengement| “ಇಂಡಿಯಾ” ಮೈತ್ರಿ ಕಡಿದುಕೊಂಡ ಡಿಎಂಕೆ; ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಮನವಿ | Speed News Kannada

dmk comeout of india blioc; request for separate seat arrengement| “ಇಂಡಿಯಾ” ಮೈತ್ರಿ ಕಡಿದುಕೊಂಡ ಡಿಎಂಕೆ; ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಮನವಿ | Speed News Kannada

ನವದೆಹಲಿ: ತಮಿಳುನಾಡಿನಲ್ಲಿ ವಿಜಯ್‌ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಕಾಂಗ್ರೆಸ್‌ ಬೆಂಬಲ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಇಂಡಿಯಾ ಮೈತ್ರಿಕೂಟದಿಂದ ದೂರ ಸರಿಯುತ್ತಿದೆ. ಇದರ ಮೊದಲ ಹೆಜ್ಜೆಯಾಗಿ ಡಿಎಂಕೆ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಕ ಕುಳಿತುಕೊಳ್ಳುವುದಿಲ್ಲ. ಆದ್ದರಿಂದ ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ಕೋರಿದೆ.

ಈ ಸಂಬಂಧ ಪಕ್ಷದ ಸಂಸದೆ ಕನಿಮೋಳಿ ಕರುಣಾನಿಧಿ ಅವರು ಲೋಕಸಭಾ ಸ್ಪೀಕರ್‌ ಅವರಿಗೆ ಪತ್ರ ಬರೆದಿದ್ದಾರೆ.

 ಸ್ಪೀಕರ್ ಓಂ ಬಿರ್ಲಾ ಅವರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ನಮ್ಮ ವಿರೋಧಿ ಬಣವನ್ನು ಬೆಂಬಲಿಸುತ್ತಿರುವುದರಿಂದ, ಲೋಕಸಭೆಯಲ್ಲಿ ಆ ಪಕ್ಷದ ಸಂಸದರ ಪಕ್ಕದಲ್ಲಿ ಕುಳಿತುಕೊಳ್ಳುವುದು ಇನ್ನು ಮುಂದೆ ನಮಗೆ ಸೂಕ್ತವಲ್ಲ. ಹಾಗಾಗಿ ಡಿಎಂಕೆ ಸಂಸದರಿಗೆ ಪ್ರತ್ಯೇಕ ಆಸನ ನಿಗದಿಪಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ವರ್ಷದ ಆರಂಭದಲ್ಲಿಯೇ ಡಿಎಂಕೆ ಕಾಂಗ್ರೆಸ್‌ ನಡುವೆ ಬಿಕ್ಕಟ್ಟು ಆರಂಭವಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 40 ಸೀಟುಗಳಿಗೆ ಪಟ್ಟು ಹಿಡಿದಿತ್ತು. ಆದರೆ ಡಿಎಂಕೆ ಕೇವಲ 25-30 ಸೀಟುಗಳನ್ನು ನೀಡಲು ಮಾತ್ರ ಒಪ್ಪಿತ್ತು. ಇನ್ನು ಚುನಾವಣೋತ್ತರ ಸಂದರ್ಭದಲ್ಲಿ ವಿಧಾನಸಭೆಯಲ್ಲಿ 5 ಶಾಸಕರನ್ನು ಹೊಂದಿರುವ ಕಾಂಗ್ರೆಸ್, ಟಿವಿಕೆಗೆ ಬೆಂಬಲ ಘೋಷಿಸಿದೆ.

ಈ ಬೆಳವಣಿಗೆಯು ರಾಷ್ಟ್ರ ಮಟ್ಟದಲ್ಲಿ ‘ಇಂಡಿಯಾ’ ಒಕ್ಕೂಟಕ್ಕೆ ಪ್ರಬಲ ಹೊಡೆತ ಕೊಟ್ಟಂತಾಗಿದೆ. ಬಿಜೆಪಿ ನೇತೃತ್ವದ ಎನ್‌ ಡಿ ಎ ವಿರುದ್ಧದ ಹೋರಾಟಕ್ಕೆ ಹಿನ್ನೆಡೆ ಎಂದೇ ಭಾವಿಸಲಾಗಿದೆ. ಸದನದ ಒಳಗೆ ಪ್ರತಿಪಕ್ಷ ಕಾಂಗ್ರೆಸ್‌ ಬೆಂಬಲಿಸುವುದೇ ಎಂದು ಕಾದುನೋಡಬೇಕಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.