2026-03-07 08:10:01

Doddaballapura MLA Dheeraj Muniraju | ಎಸ್ಮಾದಡಿ ಬಂಧಿಸಿ ಆದರೆ ಕಸ ಹಾಕಬೇಡಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು | Speed News Kannada

Doddaballapura MLA Dheeraj Muniraju | ಎಸ್ಮಾದಡಿ ಬಂಧಿಸಿ ಆದರೆ ಕಸ ಹಾಕಬೇಡಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು | Speed News Kannada

ಬೆಂಗಳೂರು: ಕ್ಷೇತ್ರದ ಹಿತಕ್ಕಾಗಿ ಎಸ್ಮಾ ಕಾಯಿದೆ ಅಡಿಯಲ್ಲಿ ಜೈಲಿಗೆ ಹೋಗಲೂ ಸಿದ್ಧ ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಗುಡುಗಿದ್ದಾರೆ.
ಅವೈಜ್ಞಾನಿಕ ಭೂಮಿಗೆ ಕಸ ಸುರಿಯುವ (ಲ್ಯಾಂಡ್ ಫಿಲ್) ಪದ್ಧತಿಯನ್ನು ತಪ್ಪಿಸಲು- ಬೆಂಗಳೂರಿನ ಕಸ ತೆಗೆದುಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನತೆ ಏನು ಪಾಪ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ತಾಲ್ಲೂಕಿನ ಜನತೆಯ ಪರವಾಗಿ ನನ್ನ ಹೋರಾಟವನ್ನು ನಾನು ನಿಲ್ಲಿಸುವುದಿಲ್ಲ. ಯಾವುದೇ ಕಾರಣಕ್ಕೂ ನಿಗದಿಪಡಿಸಿದ ಕಸದ ವಾಹನ, ಒಎಂ ಕಾಪಿಯಲ್ಲಿ ಏನಿದೆಯೋ ಅದನ್ನು ಬಿಟ್ಟು ಉಳಿದ ಹೆಚ್ಚುವರಿ ವಾಹನಗಳನ್ನು ನಾನು ನಿಲ್ಲಿಸುತ್ತೇನೆ ಎಂದು ತಿಳಿಸಿದರು.
ತಾಲ್ಲೂಕಿನ ಜನತೆ ಪರವಾಗಿ, ತಾಲ್ಲೂಕಿನ ಆರೋಗ್ಯದ ಹಿತದೃಷ್ಟಿಯಿಂದ ತಾವು ಮಾಡುತ್ತಿರುವ ಜಲ- ವಾಯು ಮಾಲಿನ್ಯದ ವಿರುದ್ಧ, ಅಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆ ವಿರುದ್ಧ ಹೋರಾಟ ಖಂಡಿತವಾಗಿ ಈಗ ಶುರುವಾಗಿದೆ. ಇನ್ನು ಮುಂದಕ್ಕೆ ಇನ್ನೂ ಹೆಚ್ಚಿನ ಹೋರಾಟವನ್ನು ರೈತರು, ಸ್ಥಳೀಯರು ಹಾಗೂ ಜನಪ್ರತಿನಿಧಿಗಳಿಂದ ರೂಪಿಸುತ್ತೇವೆ ಎಂದು ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.