ಅಮೆರಿಕ ಸಂಯುಕ್ತ ಸಂಸ್ಥಾನ ತನ್ನ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವವನ್ನು ಜುಲೈನಲ್ಲಿ ಅದ್ಧೂರಿಯಾಗಿ ಆಚರಿಸಲು ಸಜ್ಜಾಗಿದೆ. ಈ ಐತಿಹಾಸಿಕ ಸಂದರ್ಭದ ಅಂಗವಾಗಿ, ಅಮೆರಿಕದ ವಿದೇಶಾಂಗ ಇಲಾಖೆಯು ವಿಶೇಷ ಆವೃತ್ತಿಯ ಪಾಸ್‌ಪೋರ್ಟ್‌ಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ಹೊಸ ಪಾಸ್‌ಪೋರ್ಟ್‌ಗಳಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧಿಕೃತ ಭಾವಚಿತ್ರವನ್ನು ಸ್ವಾತಂತ್ರ್ಯ ಘೋಷಣಾ ಪತ್ರದ ಮೇಲೆ ಮುದ್ರಿಸಲಾಗುವುದು. ಜೊತೆಗೆ, ಅವರ ಸಹಿಯನ್ನು ಚಿನ್ನದ ಬಣ್ಣದಲ್ಲಿ ಅಳವಡಿಸಲಾಗುವುದು ಎಂದು ವಿದೇಶಾಂಗ ಇಲಾಖೆಯ ವಕ್ತಾರ ಟಾಮಿ ಪಿಗಾಟ್ ತಿಳಿಸಿದ್ದಾರೆ.
ಈ ವಿಶೇಷ ಪಾಸ್‌ಪೋರ್ಟ್‌ಗಳು ಸೀಮಿತ ಸಂಖ್ಯೆಯಲ್ಲಿ ಲಭ್ಯವಿದ್ದು, ಕೇವಲ ವಾಷಿಂಗ್ಟನ್‌ನಲ್ಲಿ ಮಾತ್ರ ವಿತರಿಸಲಾಗುವುದು. ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಅಧ್ಯಕ್ಷರ ಚಿತ್ರವನ್ನು ಸೇರಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಟ್ರಂಪ್ ಅವರು ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಸಂಸ್ಥೆಗಳು, ಕಟ್ಟಡಗಳು ಮತ್ತು ನೋಟುಗಳ ಮೇಲೆ ತಮ್ಮ ಪ್ರಭಾವವನ್ನು ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದು, ಈ ನಿರ್ಧಾರವೂ ಅದರ ಭಾಗವೆಂದು ವಿಶ್ಲೇಷಿಸಲಾಗುತ್ತಿದೆ.ಈ ವಿಶೇಷ ಪಾಸ್‌ಪೋರ್ಟ್‌ಗಳನ್ನು ಪಡೆಯಲು ಸಾಮಾನ್ಯ ಶುಲ್ಕದ ಹೊರತಾಗಿ ಯಾವುದೇ ಹೆಚ್ಚುವರಿ ಹಣ ಪಾವತಿಸುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.