2026-07-23 06:12:52

Dr G Parameshwar | ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಚಾಲನೆ ನೀಡಿದ ಸಚಿವ ಡಾ ಜಿ ಪರಮೇಶ್ವರ್‌ | Speed News Kannada

Dr G Parameshwar | ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಚಾಲನೆ ನೀಡಿದ ಸಚಿವ ಡಾ ಜಿ ಪರಮೇಶ್ವರ್‌ | Speed News Kannada

ಬೆಂಗಳೂರು: ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಇಂದು ನಡೆದ 'ಇ-ಡಿಎಆರ್ ಅನುಷ್ಠಾನ ಹಾಗೂ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2026 ಸಮಾರೋಪ ಸಮಾರಂಭವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಉದ್ಘಾಟಿಸಿದರು. ನಂತರ ಅವರು ಮಹಿಳಾ ಮತ್ತು ಎಲ್ಲ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ 'ಆಟೋ ಚಾಲಕರ ಡಿಸ್ಪ್ಲೇ ಕಾರ್ಡ್' ಬಿಡುಗಡೆ ಮಾಡಿ, ಅಟೋ ಚಾಲಕರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಜಿಬಿಎ ಆಯುಕ್ತರಾದ ಮಹೇಶ್ವರ್ ರಾವ್, ಸಾರಿಗೆ ಇಲಾಖೆಯ ಕಾರ್ಯದರ್ಶಿ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಸಂಚಾರ ಪೊಲೀಸ್ ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ, ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರಾದ ಪರಶುರಾಮ್ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.