ಬೆಂಗಳೂರು: ಪುತ್ರ, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸಂಪುಟ ಸೇರ್ಪಡೆಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಆರಂಭದಲ್ಲಿ ಯತೀಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ದರಾಮಯ್ಯ ಸಮ್ಮತಿಸಿರಲಿಲ್ಲ.ಆದರೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಸಿದ್ದರಾಮಯ್ಯ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯತೀಂದ್ರ ಅವರ ಸಂಪುಟ ಸೇರ್ಪಡೆಗೆ ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಮೊದಲೇ ಹೇಳಿದಂತೆ ರಾಜ್ಯಸಭೆಗೆ ಹೋಗುವುದಿಲ್ಲ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ನಂತರ ಸಿದ್ದರಾಮಯ್ಯ ಅವರು, ದೆಹಲಿಗೆ ತೆರಳಿದ್ದು ನಾಳೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿಲಿದ್ದಾರೆ.