2026-06-25 03:38:05

Drug detection operation | ಡ್ರಗ್ಸ್ ಪತ್ತೆ ಕಾರ್ಯಾಚರಣೆ ಪೊಲೀಸರಿಂದ ವಾಹನಗಳ ತಲಾಶ್ | Speed News Kannada

Drug detection operation | ಡ್ರಗ್ಸ್ ಪತ್ತೆ ಕಾರ್ಯಾಚರಣೆ ಪೊಲೀಸರಿಂದ ವಾಹನಗಳ ತಲಾಶ್ | Speed News Kannada

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಎಗ್ಗಿಲ್ಲದೇ ನಡೆಯುತ್ತಿದ್ದು, ಯುವ ಸಮೂಹ ಸಂಪೂರ್ಣ ದಾರಿ ತಪ್ಪುತ್ತಿದೆ.
ಮಾದಕಜಾಲ ಸದೆಬಡಿಯಲು ಪೊಲೀಸರು ಪಣತೊಟ್ಟಿ ನಿಂತಿದ್ದಾರೆ. ಬೆಂಗಳೂರಿನ ಗಲ್ಲಿಗಲ್ಲಿಗಳಲ್ಲೂ ಪೊಲೀಸರು ತಲಾಶ್‌ ನಡೆಸುತ್ತಿದ್ದಾರೆ.ಮಾದಕ ಜಾಲದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶನಿವಾರ ಬೆಳ್ಳಂ ಬೆಳಗ್ಗೆ ಫಿಲ್ಡಿಗಿಳಿದ ಬೆಂಗಳೂರು ಪೊಲೀಸು ವಿವಿಧೆಡೆ ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗೆ ಐದು ಗಂಟೆಯಿಂದ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಬಸ್ ಗಳು, ಗೂಡ್ಸ್ ಆಟೋಗಳು, ಅನುಮಾಸ್ಪದ ಜಾಗಗಳ ಮೇಲೆ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರು ಉತ್ತರ ವಿಭಾಗದ ಪೊಲೀಸಿಂದ ಪರಿಶೀಲನೆ ಕಾರ್ಯ ನಡೆಯುತ್ತಿದ್ದು. ಮಲ್ಲೇಶ್ವರಂ, ಯಶವಂತಪುರ, ರಾಜಾಜಿನಗರ, ಆರ್ ಎಮ್ ಸಿಯಾರ್ಡ್ ಸೇರಿ ಹಲವು ಕಡೆ ಪರಿಶೀಲನೆ ನಡೆದಿದೆ. ವಾಹನಗಳನ್ನು ತಡೆದು ಪರಿಶೀಲನೆ ನಡೆಸಿದ ಪೊಲೀಸು ಅನುಮಾನ ಬಂದ ವ್ಯಕ್ತಿಗಳ ಸಮಗ್ರ ವಿಚಾರಣೆ ನಡೆಸಿದ್ದಾರೆ. ಹಲವು ವಾಹನಗಳನ್ನು ಜಪ್ತಿ ಕೂಡ ಮಾಡಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.