2026-06-25 03:36:57

Drug Seized | ಸಾಕ್ಷರರ ನಾಡಿನ ಯುವಕರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ 14 ಕೋಟ್ ಮೌಲ್ಯದ ಮಾಲು ವಶ | Speed News Kannada

Drug Seized | ಸಾಕ್ಷರರ ನಾಡಿನ ಯುವಕರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ 14 ಕೋಟ್ ಮೌಲ್ಯದ ಮಾಲು ವಶ | Speed News Kannada

 ಬೆಂಗಳೂರಿನಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಜಾಲದ ವಿರುದ್ಧ ಸಮರ ಸಾರಿರುವ ನಂದಿನಿ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಜಾಲದಲ್ಲಿ ತೊಡಗಿದ್ದ ಕೇರಳ ಮೂಲದ ಪೆಡ್ಡರ್‌ಗಳು ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂದಿನಿ ಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಸೌಗೇಶ್ ಮತ್ತು ಅಲ್ತಾಫ್ ಎಂಬ ಇಬ್ಬರು ಡ್ರಗ್ ಪೆಡ್ಡರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 5 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ 5 ಕೆಜಿ 700 ಗ್ರಾಂ ತೂಕದ ಅತ್ಯಂತ ದುಬಾರಿ 'ಹೈಡೋ ಗಾಂಜಾ'ವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಈ ಮಾದಕ ವಸ್ತುವನ್ನು ವಿದೇಶದಿಂದ ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಇವರ ಮೇಲೆ ಈಗಾಗಲೇ ಅಲ್ಲಿನ ವಿವಿಧ ಠಾಣೆಗಳಲ್ಲಿ ಎನ್‌ಡಿಪಿಎಸ್ (NDPS) ಪ್ರಕರಣಗಳು ದಾಖಲಾಗಿವೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಯಶವಂತಪುರ 9 ಕೋಟಿ ಮೌಲ್ಯದ ಎಂಡಿಎಂಎ ಸಹಿತ ರೌಡಿಶೀಟರ್ ಲಾಕ್
ಮತ್ತೊಂದೆಡೆ, ಯಶವಂತಪುರ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಸೈಯದ್ ಸುಹೇಲ್, ಮಹಮ್ಮದ್ ಸಮೀರ್, ಸಾಧಿಕ್ ಪಾಷಾ ಮತ್ತು ಮಹಮ್ಮದ್ ಹಜ್ರುಲ್ಲ ಹಕ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 9 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಎಂಡಿಎಂಎ (MDMA) ಕ್ರಿಸ್ಟಲ್‌ಗಳನ್ನು ಸೀಜ್ ಮಾಡಲಾಗಿದೆ. ಈ ಪೈಕಿ ಸೈಯದ್ ಸುಹೇಲ್ ಹೊಸಕೋಟೆಯ ಕುಖ್ಯಾತ ರೌಡಿಶೀಟರ್ ಆಗಿದ್ದು, ಈ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಇನ್ನು ಬಂಧಿತ ಆರೋಪಿಗಳು ನೈಜೀರಿಯಾ ಮೂಲದ ಪ್ರಜೆಗಳಿಂದ ಈ ಡ್ರಗ್ಸ್ ಖರೀದಿಸಿ ಬೆಂಗಳೂರಿನ ಸ್ಥಳೀಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಮತ್ತು ಐದು ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸದ್ಯ ಡ್ರಗ್ ಸಪ್ಪೆ ಮಾಡಿದ್ದ ನೈಜೀರಿಯಾ ಪ್ರಜೆಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.