2026-03-07 08:36:09

Drugs connection | ಡ್ರಗ್ಸ್‌ ನಂಟು ತಮಿಳು ನಟಿ ಅಂಜು ಕೃಷ್ಣ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಬಂಧನ | Speed News Kannada

Drugs connection | ಡ್ರಗ್ಸ್‌ ನಂಟು ತಮಿಳು ನಟಿ ಅಂಜು ಕೃಷ್ಣ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಬಂಧನ | Speed News Kannada

ಚೆನ್ನೈ: ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದು, ಓರ್ವ ನಟಿ, ಸಹಾಯಕ ನಿರ್ದೇಶಕಿ ಸೇರಿದಂತೆ ಎಂಟು ಮಂದಿಯನ್ನು ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡ ಬಂಧಿಸಿದೆ. ಇವರ ಬಳಿ ಇದ್ದ ಡ್ರಗ್ಸ್ ಅನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಬಂಧಿತ ಆರೋಪಿಗಳು.
ಆರಂಭದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರವಕ್ಕಂ ಎಂಬಲ್ಲಿ 33 ವರ್ಷದ ವಿಘ್ನೇಶ್ವರನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ವೆಂಕಟೇಶ್ ಎಂಬಾತನಿಂದ  ಆತ ಡ್ರಗ್ಸ್‌ ಖರೀದಿ ಮಾಡುತ್ತಿದ್ದ ಎಂದು ಮಾಹಿತಿ ನೀಡಿದ್ದಾನೆ. ಪೊಲೀಸರ ಅಣತಿಯಂತೆ ವಿಘ್ನೇಶ್ವರನ್ ಗ್ರಾಹಕನ ರೀತಿ ವೆಂಕಟೇಶ್ ನನ್ನು ಸಂಪರ್ಕಿಸಿ ಡ್ರಗ್ಸ್ ಕೊಡಲು ಹೇಳಿ, ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಅಲ್ಲಿಗೆ ಬಂದ ಆತನಿಂದ ಆರು ಗ್ರಾಂ ಮೆಥಾಫೆಟಮೈನ್, ಏಳು ಗ್ರಾಂ ಓಜಿ ಗಾಂಜಾ, ಹದಿನೈದು ಗ್ರಾಂ ಗಾಂಜಾ, ಸ್ಮೋಕಿಂಗ್ ಬಾಂಗ್, ಸ್ಟ್ಯಾಂಪ್ ಮತ್ತು ಒಂಬತ್ತು ಮೊಬೈಲುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈತ ನೀಡಿದ ಮಾಹಿತಿ ಆಧರಿಸಿ ನಟಿ ಅಂಜು ಕೃಷ್ಣ ಮತ್ತು ವಿನ್ಸಿ ನಿವೇತಾ ಅವರನ್ನೂ ಬಂಧಿಸಲಾಗಿದೆ. ಅಂಜು ಕೃಷ್ಣ ‘ವೆಲ್ಲಿಮಲೈ’ ಮಲಯಾಳಂನ ‘ಆರೊ’, ‘ಆಕಾಶಂ ಕದನ್’ ಸಿನಿಮಾಗಳಲ್ಲಿ ನಟಿಸಿದ್ದಾರೆ ಎಂದು ತಿಳಿದು ಬಂದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.