2026-05-12 05:38:19

drugs mafia bust; 2.56 rs worth hydro ganja seized| ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು; ರೂ.2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ |Speed News Kannada

drugs mafia bust; 2.56 rs worth hydro ganja seized| ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು; ರೂ.2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ  |Speed News Kannada

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ಹಾಗೂ ಅಶೋಕನಗರ ಪೊಲೀಸ್‌‍ ಠಾಣೆ ವ್ಯಾಪ್ತಿಗಳಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಕೇರಳದ ಮೂವರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿ ಅವರಿಂದ ರೂ.2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕೇರಳದ ಅಮ್ಜದ ಮೊಹಮದ್‌ (38), ಮೊಹಮದ್‌ ಯಾಸೀರ್‌ (37), ಕೇರಳದ ಸೀನಾ (28) ಹಾಗೂ ಬೆಂಗಳೂರಿನ ಅಫ್ರಾನ್‌ (26), ಸಜೀತ್‌ (21) ಎಂಬುವರನ್ನು ಬಂಧಿಸಿದ್ದಾರೆ.

ಆರೋಪಿಗಳು ಹೊರರಾಜ್ಯ ಹಾಗೂ ಸ್ಥಳೀಯ ಅಪರಿಚಿತ ವ್ಯಕ್ತಿಗಳಿಂದ ಹೈಡ್ರೋ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ ಉದ್ಯೋಗಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಶೋಕನಗರ ಠಾಣೆ ಪೊಲೀಸರು ರೂ.2.24 ಕೋಟಿ ಮೌಲ್ಯದ 3 ಕೆಜಿ 222 ಗ್ರಾಂ ಮತ್ತು ಮಲ್ಲೇಶ್ವರಂ ಠಾಣೆ ಪೊಲೀಸರು ರೂ.32.48 ಲಕ್ಷ ಮೌಲ್ಯದ 464 ಗ್ರಾಂ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಗೆ ಹೈಡ್ರೋ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.