2026-06-25 02:10:34

Drugs worth Rs 11.86 crore seized in Bengaluru, 10 arrested | ಬೆಂಗಳೂರಿನಲ್ಲಿ 11.86 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, 10 ಮಂದಿಯ ಬಂಧನ | Speed news kannada

Drugs worth Rs 11.86 crore seized in Bengaluru, 10 arrested | ಬೆಂಗಳೂರಿನಲ್ಲಿ 11.86 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, 10 ಮಂದಿಯ ಬಂಧನ | Speed news kannada

ಸಿಲಿಕಾನ್‌ ಸಿಟಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ನಗರದ ವಿವಿಧೆಡೆ ಸುಮಾರು 11.86 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮಾದಕ ವಸ್ತು ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಪೊಲೀಸರು ಕೈ ಗೊಂಡ ಈ ಕಾರ್ಯದಲ್ಲಿ ಯಶಸ್ವಿಯಾಗಿದ್ದು, ಅಕ್ರಮ ಡ್ರಗ್ಸ್‌ ಮಾರಟದಲ್ಲಿ ಶಾಮೀಲಾಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಹಾಗೂ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಚರಣೆ ನಡೆಸಿದ್ದು, ಬಂಧಿತರಿಂದ ಸುಮಾರು 5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್, 21 ಕೆಜಿ ಗಾಂಜಾ ಮತ್ತು 19 ಗ್ರಾಂ ಎಕ್ಸ್‌ಟೆಸಿ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಟ ಪೈಕಿ ವಿದೇಶಿ ಮಹಿಳೆಯರು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿ ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.