ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಮಳಿಗೆಯನ್ನು ಪತ್ತೆಹಚ್ಚಿದ್ದಾರೆ. ಮೈಸೂರಿನ ಹಲವೆಡೆ ಅಕ್ರಮವಾಗಿ ಗಂಜಾ ಮಾರುತ್ತಿದ್ದ ಮೊಹಮ್ಮದ್ ಇರ್ಫಾನ್ ಹಾಗೂ ಸಿದ್ಧಿಖಿ ಮೊಹಲ್ಲಾ ನನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ದಾಸನಪುರ ಗ್ರಾಮದಲ್ಲಿ ಇರುವ ಪಕ್ಕದ ಆಸ್ಪತ್ರೆ ಕಾವಲ್‌ನಲ್ಲಿ ಇದ್ದ ಒಂಟಿ ಮನೆಯಲ್ಲಿ ಈ ಆರೋಪಿಗಳು ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹಣೆಯನ್ನು ನಡೆಸುತ್ತಿದ್ದರು. ಪೊಲೀಸರು ಅಕ್ರಮ ಜಾಲದ ಬಗ್ಗೆ ಪತ್ತೆಹಚ್ಚಿ ಸುಮಾರು 7.35 ಕೆ.ಜಿ ತೂಕದ ಮೆಫೆಡ್ರೋನ್ ಮತ್ತು 41 ಕೆ.ಜಿ ತೂಕದ ಡ್ರಗ್ಸ್ ಪ್ರಿಕರ್ಸರ್ ವಸ್ತುಗಳನ್ನು ವಶಪಡಸಿಕೊಂಡಿದ್ದಾರೆ, ಒಟ್ಟು ಆರೋಪಿಗಳ ಬಳಿ ಇದ್ದ 48 ಕೆ.ಜಿ ತೂಕದ ಡ್ರಗ್ಸ್ ಪದಾರ್ಥಗಳನ್ನು ಪೊಲೀಸರು ಜಪ್ತಿ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಈ ಪ್ರಕರಣ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ದೂರು ದಾಖಲಿಸಿಕೊಳ್ಳಲಾಗಿದೆ.