2026-03-07 07:30:18

Drugs worth Rs. 21.50 crore seized | ರೂ21.50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ವಿದೇಶಿಯರು ಸೇರಿ 15 ಮಂದಿ ಬಂಧನ | Speed News Kannada

Drugs worth Rs. 21.50 crore seized | ರೂ21.50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ವಿದೇಶಿಯರು ಸೇರಿ 15 ಮಂದಿ ಬಂಧನ | Speed News Kannada

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಹಾಗೂ ಹೊರರಾಜ್ಯದ 12 ಮಂದಿ ಡ್ರಗ್‌ ಪೆಡ್ಲರ್‌ ಗಳನ್ನು ಬಂಧಿಸಿ ಅವರಿಂದ  ರೂ. 21.50 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹಾಗೂ ಅಮೃತಹಳ್ಳಿ, ಹೆಬ್ಬಗೋಡಿ, ಜೆ.ಬಿ.ನಗರ, ಶೇಷಾದ್ರಿಪುರಂ, ಮಹಾಲಕ್ಷೀ ಲೇಔಟ್‌ ಮತ್ತು ಗೋವಿಂದಪುರ ಠಾಣೆಗಳ ಪೊಲೀಸರು ದಾಳಿ ನಡೆಸಿ ಒಟ್ಟು 15 ಮಂದಿಯನ್ನು ಬಂಧಿಸಿದ್ದಾರೆ.
ಆರೋಪಿಗಳು ಹೈಡ್ರೋ ಗಾಂಜಾ, ಗಾಂಜಾ, ಎಂಡಿಎಂಎ, ಕೊಕೇನ್‌, ಎಲ್‌ಎಸ್‌‍ಡಿ ಪಿಲ್ಸ್‌ , ಎಲ್‌ಎಸ್‌‍.ಡಿ ಸ್ಟ್ರಿಪ್ಸ್‌  ಮತ್ತು ಹ್ಯಾಶಿಷ್‌ ಆಯಿಲ್‌ ಜಪ್ತಿ ಮಾಡಲಾಗಿದೆ.
ಆರೋಪಿಗಳ ವಿರುದ್ಧ ಎನ್‌ಡಿಪಿಎಸ್‌‍ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. 
ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ವಿದೇಶ ಹಾಗೂ ಹೊರರಾಜ್ಯಗಳ ಅಪರಿಚಿತ ವ್ಯಕ್ತಿಗಳಿಂದ ಡ್ರಗ್ಸ್‌ ಖರೀದಿಸಿ ಬೆಂಗಳೂರಿನಲ್ಲಿ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ-ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.