ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಮೂಲಕ ಸಂಚು ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಎಸ್ ಐಆರ್ ನಿಂದ ಯಾರೊಬ್ಬರೂ ಮತದಾನದ ಹಕ್ಕು ಕಳೆದುಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದೆನೆ ಎಂದು ಹೇಳಿದರು.
ಮತದಾನದ ಹಕ್ಕು ಕಳೆದುಕೊಂಡರೆ ಪಿಂಚಣಿ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಸರ್ಕಾರಿ ಯೋಜನೆಗಳಿಂದ ವಂಚಿತರಾಗುತ್ತಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.