2026-03-07 01:42:55

ED summons Anil Ambani | ಹಣ ಅಕ್ರಮ ವರ್ಗಾವಣೆ ಪ್ರಕರಣ ಅನಿಲ್ ಅಂಬಾನಿಗೆ ಇ ಡಿ ಸಮನ್ಸ್ | Speed News Kannada

ED summons Anil Ambani | ಹಣ ಅಕ್ರಮ ವರ್ಗಾವಣೆ ಪ್ರಕರಣ ಅನಿಲ್ ಅಂಬಾನಿಗೆ ಇ ಡಿ ಸಮನ್ಸ್ | Speed News Kannada

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್‌ ಸಮೂಹದ ಮುಖ್ಯಸ್ಥ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಫೆಬ್ರುವರಿ 10 ಮತ್ತು 17ರಂದು ವಿಚಾರಣೆಗೆ ಹಾಜರಾಗುವಂತೆ ಅನಿಲ್ ಅಂಬಾನಿ ಮತ್ತುಅವರ  ಪತ್ನಿ ಟೀನಾ ಅಂಬಾನಿಗೆ ಇ.ಡಿ ಸೂಚಿಸಿತ್ತು. ಆದರೆ, ಅವರು ಹಾಜರಾಗಿರಲಿಲ್ಲ. ಟೀನಾ ಅವರನ್ನೂ ವಿಚಾರಣೆಗೆ ಕರೆದಿದೆಯೇ ಎಂದು ಖಚಿತವಾಗಿಲ್ಲ.
ರಿಲಯನ್ಸ್‌ ಸಮೂಹ ಮತ್ತು ಅದರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನಿಲ್‌ ಅಂಬಾನಿ ಅವರನ್ನು ಕಳೆದ ವರ್ಷ ಇಡಿ ವಿಚಾರಣೆ ನಡೆಸಿತ್ತು.
ಅನಿಲ್ ಧೀರೂಭಾಯಿ ಅಂಬಾನಿ ಸಮೂಹದ ವಿರುದ್ಧದ ಬ್ಯಾಂಕ್‌ ವಂಚನೆ ಮತ್ತು ಅವ್ಯವಹಾರ ಪ್ರಕರಣಗಳ ಕುರಿತ ತನಿಖೆಗೆ ಇ.ಡಿ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.