2026-07-23 02:31:15

Eggs hurled at BJP MLA | ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ! | SNK

Eggs hurled at BJP MLA | ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ! | SNK

ಬೆಂಗಳೂರು : ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್‌ ಸೇರಿ 9 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪುಣ್ಯೇಶ್, ನೂರುಲ್ಲಾ, ಹರೀಶ್, ಸೋಯಬ್, ಪುಣ್ಯನಾಯ್ಕ್ ಸೇರಿದಂತೆ ಒಟ್ಟು 9 ಮಂದಿಯನ್ನು ತಡರಾತ್ರಿ ಬಂಧಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆಯಲು ಪುಣ್ಯೇಶ್ ಬಾಕ್ಸ್‌ವೊಂದರಲ್ಲಿ ಮೊಟ್ಟೆಗಳನ್ನು ತಂದಿದ್ದ ಎನ್ನಲಾಗಿದೆ. ಮೊಟ್ಟೆಗಳನ್ನು ಎಲ್ಲಿಂದ ತಂದಿದ್ದ, ಈ ಕೃತ್ಯ ಪೂರ್ವನಿಯೋಜಿತವಾಗಿತ್ತೇ, ಮೊಟ್ಟೆ ಎಸೆಯಲು ಆರೋಪಿಗೆ ಯಾರು ಸೂಚನೆ ನೀಡಿದ್ದರು ಎಂಬ ಬಗ್ಗೆ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದಾರೆ.

ಪುಣ್ಯೇಶ್ ಜೊತೆ ಇನ್ನೂ ಕೆಲವರು ಭಾಗಿಯಾಗಿದ್ದಾರೆಯೇ ಎಂಬ ಅನುಮಾನವೂ ಪೊಲೀಸರಿಗೆ ಇದ್ದು, ಆತನ ಜೊತೆಗಿದ್ದವರು ಯಾರು ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ತಡರಾತ್ರಿವರೆಗೂ ಶಿವಾಜಿನಗರ ಪೊಲೀಸ್‌ ಠಾಣೆಯಲ್ಲಿ ಬಂಧಿತ 9 ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕಲೆಹಾಕುತ್ತಿರುವ ಪೊಲೀಸರು, ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.