ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು ನ್ಯಾಯಬದ್ಧವಾಗಿ ನಡೆಸುವಂತೆ ಇಂದು ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಮನವಿ ಸಲ್ಲಿಸಿದೆ.
ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ತಂಡ ಈ ಮನವಿ ಸಲ್ಲಿಸಿದೆ.
ನಂತರ ಮಾತನಾಡಿದ ಶಿವಕುಮಾರ್ ಅವರು, ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು, ಮನೆ-ಮನೆ ಸಮೀಕ್ಷೆಯ ಮೂಲಕ ಪಾರದರ್ಶಕ ಹಾಗೂ ದೋಷಮುಕ್ತ ಪಟ್ಟಿಯನ್ನು ಸಿದ್ಧಪಡಿಸುವುದು ಆಯೋಗದ ಆದ್ಯತೆಯಾಗಲಿ ಎಂದು ಒತ್ತಾಯಿಸಲಾಯಿತು ಎಂದು ತಿಳಿಸಿದರು.
ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್, ಎಂಎಲ್‌ಸಿಗಳಾದ ಪುಟ್ಟಣ್ಣ, ಶ್ರೀನಿವಾಸ್ ಮತ್ತಿತರರು ನಿಯೋಗದಲ್ಲಿದ್ದರು.