2026-04-23 04:57:16

Elections in Tamil Nadu, West Bengal, voting in full swing at 7 am | ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ, ಬೆಳಗ್ಗೆ 7ಗಂಟೆಯಿದಲೇ ಬಿರುಸಿನ ಮತದಾನ | Speed news kannada

Elections in Tamil Nadu, West Bengal, voting in full swing at 7 am | ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ, ಬೆಳಗ್ಗೆ 7ಗಂಟೆಯಿದಲೇ ಬಿರುಸಿನ  ಮತದಾನ | Speed news kannada

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಕ್ಷೇತ್ರಗಳಲ್ಲಿ ಇಂದು ಗುರುವಾರ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ಪ. ಬಂಗಾಳದ 294 ಕ್ಷೇತ್ರಗಳಲ್ಲಿ ಇಂದು ಮೊದಲನೇ ಹಂತದ 152 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ತಮಿಳುನಾಡಿನಲ್ಲಿ, 5.73 ಕೋಟಿಗೂ ಹೆಚ್ಚು ಮತದಾರರು 4,023 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮುಖ್ಯವಾಗಿ ಡಿಎಂಕೆ ನೇತೃತ್ವದ ಮೈತ್ರಿ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ನಡುವಿನ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಐದು ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಇದಲ್ಲದೆ, ನಟ ವಿಜಯ ಅವರ ಟಿವಿಕೆ ಪಕ್ಷದ ಚುನಾವಣಾ ಪ್ರವೇಶವು ಸ್ಪರ್ಧೆಗೆ ಹೊಸ ಆಯಾಮವನ್ನು ನೀಡಿದ್ದು, ದ್ರಾವಿಡ ಪಕ್ಷಗಳಿಗೆ ಕಠಿಣ ಸವಾಲು ಎದುರಾಗಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು ಇಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ ಏಪ್ರಿಲ್‌ 29ರಂದು ನಡೆಯಲಿದೆ. ಎರಡೂ ರಾಜ್ಯಗಳಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮತ ಎಣಿಕೆ ಮೇ 4ರಂದು ನಡೆಯಲಿದೆ. ಇದೇ ದಿನ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಮತ ಎಣಿಕೆ ನಡೆಯಲಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.