2026-07-23 09:10:34

Employees using the metro will get Rs 2,000 per month | ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ | Speed news kannada

Employees using the metro will get Rs 2,000 per month | ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ | Speed news kannada

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಸುಮಾರು ಒಂದು ಕೋಟಿಗೂ ಅಧಿಕ ವಾಹನಗಳು ರಸ್ತೆಗಿಳಿಯುತ್ತಿರುವುದರಿಂದ ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೆ ಗುರಿಯಾಗಿದೆ. ಈ ಗಂಭೀರ ಸಮಸ್ಯೆಯನ್ನು ಹೋಗಲಾಡಿಸಲು ಈಗ ಖಾಸಗಿ ಕಂಪನಿಗಳು ವಿನೂತನ ದಾರಿಯನ್ನು ಮಾಡಿಕೊಂಡಿವೆ. ಬಯೋಕಾನ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಕೊಡುಗೆಯನ್ನು ಪ್ರಕಟಿಸಿದೆ.  ಸರಿಯಾದ ಸಮಯಕ್ಕೆ ಕಚೇರಿ ತಲುಪಲು ನೆರವಾಗುವಂತೆ ಬಯೋಕಾನ್ ಸಂಸ್ಥೆ ಟೆಕ್ಕಿಗಳಿಗೆ ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಬಳಸಲು ಸೂಚಿಸಿದೆ. ವಾರದಲ್ಲಿ ಕನಿಷ್ಠ ಎರಡು ದಿನ ಸಾರ್ವಜನಿಕ ಸಾರಿಗೆ ಬಳಸುವ ಉದ್ಯೋಗಿಗಳಿಗೆ ಸಂಬಳದ ಜೊತೆಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಮೊದಲ ಹಂತದಲ್ಲಿ ಒಂದು ಸಾವಿರ ಉದ್ಯೋಗಿಗಳಿಗೆ ಪ್ರತಿ ತಿಂಗಳು 2,000 ರೂಪಾಯಿಗಳ ಮೆಟ್ರೋ ಪಾಸ್ ಅಥವಾ ಇನ್ಸೆಂಟಿವ್ ನೀಡಲು ಸಂಸ್ಥೆ ನಿರ್ಧರಿಸಿದೆ. ಬಯೋಕಾನ್ ಸಂಸ್ಥೆಯ ಈ ನಿರ್ಧಾರವು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮಾದರಿಯಾಗಿದ್ದು, ಇತರ ಕಂಪನಿಗಳು ಇದನ್ನು ಹೇಗೆ ಅಳವಡಿಸಿಕೊಳ್ಳುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.