ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ಕಳೆದ ತಿಂಗಳು ನೈಸ್ ರಸ್ತೆಯ ಸೋಂಪುರ ಸರ್ಕಲ್ ನಲ್ಲಿ ಓಪನ್ ಆಗಿದ್ದ ಶುದ್ಧ ತಿಂಡಿ ಹೋಟೆಲ್ನಲ್ಲಿ ದಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಈಡೀ ಹೋಟೆಲ್ ಹೊತ್ತಿ ಉರಿದು ಭಸ್ಮವಾಗಿದೆ. ಕಳೆದ ತಿಂಗಳು ಅಂದರೆ ಮಾರ್ಚ್ ನಲ್ಲಿ ಅಷ್ಟೇ ಶುದ್ಧ ತಿಂಡಿ ಹೊಸದಾಗಿ ಆರಂಭವಾಗಿತ್ತು. ಆದ್ರೆ, ಇಂದು (ಏಪ್ರಿಲ್ 16) ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಒಳಗಡೆ ಇದ್ದ ಸಿಬ್ಬಂದಿ ಬಚಾವ್ ಆಗಿದ್ದಾರೆ.