2026-03-07 07:33:32

Equal society is created weaker sections can come into Mainstream | ಸಮಸಮಾಜ ನಿರ್ಮಾಣವಾದಾಗ ದುರ್ಬಲವರ್ಗದವರೂ ಮುಖ್ಯವಾಹಿನಿಗೆ ಬರಲು ಸಾಧ್ಯ ಸಿಎಂ ಸಿದ್ದರಾಮಯ್ಯ | Speed News Kannada

Equal society is created weaker sections can come into Mainstream | ಸಮಸಮಾಜ ನಿರ್ಮಾಣವಾದಾಗ ದುರ್ಬಲವರ್ಗದವರೂ ಮುಖ್ಯವಾಹಿನಿಗೆ ಬರಲು ಸಾಧ್ಯ ಸಿಎಂ ಸಿದ್ದರಾಮಯ್ಯ | Speed News Kannada

ವಿಜಯನಗರ: ಇನ್ನು ಮುಂದೆ ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಹಂಪಿ ಉತ್ಸವ 2026 ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಎಂ ಪಿ ಪ್ರಕಾಶ್ ಅವರು ಮೈಸೂರು ದಸರಾ ಉತ್ಸವ ಮಾದರಿಯಲ್ಲಿ ಹಂಪಿ ಉತ್ಸವ ನಡೆಸಲು ಬಯಸಿದ್ದರು. ಅವರು, ಕನ್ನಡ ನಾಡು ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ದೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂಪಿ ಪ್ರಕಾಶ್ ಅವರು ಎಂದರು. 
ಕನ್ನಡ ನಾಡು ನುಡಿಗೆ ಸರ್ಕಾರದ ಪ್ರೋತ್ಸಾಹ:
ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ ಸಂಸ್ಕೃತಿ ಕಲೆ ಗಳಿಗೆ ಹೆಚ್ಚಿನ ಒತ್ತು ನೀಡುತ್ತದೆ. ವಿಜಯನಗರ ಕಾಲದಲ್ಲಿ ಸಂಪ್ಭರಿತವಾದ ಹಂಪಿಯ ಹಿರಿಮೆಯನ್ನು ಹಂಪಿ ಉತ್ಸವದಿಂದ ತಿಳಿಯಬಹುದಾಗಿದೆ.  ವಿದೇಶಿ ಪ್ರವಾಸಿಗ ಅಬ್ದುಲ್ ರಜಾಕ್ , ವಿಜಯನಗರ ಶ್ರೀಮಂತವಾದ ಸ್ಥಳವಾಗಿತ್ತು ಎಂದು ಉಲ್ಲೇಖಿಸಿದ್ದನ್ನು ಮುಖ್ಯಮಂತ್ರಿಗಳು ವಿವರಿಸಿದರು.
ಅಸಮಾನತೆ ನಿವಾರಣೆಯಿಂದ ಸಮಸಮಾಜ ನಿರ್ಮಿಸಲು ಸಾಧ್ಯ
ಸಮಾಜದಲ್ಲಿ ಬಡವ ಶ್ರೀಮಂತ, ಉತ್ತಮ ಮತ್ತು ಕೆಳ ಜಾತಿಗಳೆಂಬ ಬೇಧವಿದೆ. ಡಾ.ಬಿ.ಆರ್. ಅಂಬೇಡ್ಕರ್ ರವರು ಸಂವಿಧಾನ ರಚಿಸದಿದ್ದರೆ, ಸಮಾನ ಅವಕಾಶಗಳು ದೊರೆಯಲು ಸಾಧ್ಯವಾಗುತ್ತಿರಲಿಲ್ಲ. ಸಮಾಜದ ಅಸಮಾನತೆಯನ್ನು ತೊಡೆದುಹಾಕಿದರೆ ಸಮಸಮಾಜ ನಿರ್ಮಾಣ ಸಾಧ್ಯ. 2013 ರಲ್ಲಿ ಮತ್ತು 2023 ರಲ್ಲಿ ಮುಖ್ಯಮಂತ್ರಿಯಾಗಿ ನಾನು ತಂದಿರುವ ಕಾರ್ಯಕ್ರಮಗಳು ಅಸಮಾನತೆಯ ನಿವಾರಣೆಗೆ ತಂದವುಗಳಾಗಿವೆ. ಸಮಸಮಾಜ ನಿರ್ಮಿಸಿದಾಗ ಮಾತ್ರ ದುರ್ಬಲವರ್ಗದವರೂ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕ ಶಕ್ತಿ
ಸರ್ಕಾರ ಅನೇಕ ಭಾಗ್ಯ ಯೋಜನೆಗಳನ್ನು ನೀಡಿದ್ದು, 2023 ರಿಂದಲೂ ಗ್ಯಾರಂಟಿ ಯೋಜನೆಗಳನ್ನು ನೀಡಿ, ಅಸಮಾನತೆಯನ್ನು ನಿವಾರಿಸುವ  ಉದ್ದೇಶ ಹೊಂದಿದೆ. ಜನರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ಸಾಧ್ಯವಾಗಿಸದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಬಹುದು.  ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಸುಮಾರು 60 ಸಾವಿರ ರೂ.ಗಳ ಆರ್ಥಿಕ ಬಲವನ್ನು ತುಂಬುತ್ತಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತಿದೆ. ಜಾತಿವ್ಯವಸ್ಥೆ ಇಲ್ಲವಾಗಲು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಸ್ವಾತಂತ್ರ್ಯ ಬರಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ಸಚಿವರುಗಳಾದ ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಸಂಸದ ತುಕಾರಾಮ್ ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಶಾಸಕರುಗಳು, ಮುಖಂಡರುಗಳು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.