2026-03-07 05:20:40

Establishment of Tribal University in The State | ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ಪರಿಶೀಲಿಸಿ ತೀರ್ಮಾನ ಸಿಎಂ ಸಿದ್ದರಾಮಯ್ಯ | Speed News Kannada

Establishment of Tribal University in The State | ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ಪರಿಶೀಲಿಸಿ ತೀರ್ಮಾನ ಸಿಎಂ ಸಿದ್ದರಾಮಯ್ಯ | Speed News Kannada

ಹರಿಹರ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ  ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೆಟ್ರೋ ದರ  ಹೆಚ್ಚಳವಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮೆಟ್ರೋ ದರವನ್ನು ಕೇಂದ್ರ ಸರ್ಕಾರದಿಂದ ನೇಮಕವಾಗಿರುವ ಮೆಟ್ರೋ ಅಧ್ಯಕ್ಷರು ನಿಗದಿ ಮಾಡುತ್ತಾರೆ. ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದರು. ಮೆಟ್ರೋ ದರದ ಬಗ್ಗೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು.
ಭಾರತ ಮತ್ತು ಅಮೆರಿಕ ನಡುವೆ ಆಗಿರುವ ಒಪ್ಪಂದದಿಂದ ರೈತರಿಗೆ ಅನ್ಯಾಯವಾಗುತ್ತದೆ. ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ ಎಂದರು. 
 ವಾಲ್ಮೀಕಿ ಜನಾಂಗದವರಿಗೆ  ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಾವು  ಸಚಿವರನ್ನು  ತೆಗೆದುಹಾಕಿಲ್ಲ. ಕಾರಣಾಂತರದಿಂದ ರಾಜೀನಾಮೆ ಕೊಡುವ ಪರಿಸ್ಥಿತಿ ಬಂತು. ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಪರಿಗಣಿಸಲಾಗುವುದು ಎಂದರು.
ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.  ರಾಜ್ಯ ಬಜೆಟ್ ಗೆ ಸಂಬಂಧಿಸಿದಂತೆ ತಯಾರಿ  ನಡೆಯುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು  ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.