2026-04-23 11:01:10

EV vehicles will be expensive in Karnataka from now on|ಇನ್ಮುಂದೆ ಕರ್ನಾಟಕದಲ್ಲಿ ಇವಿ ವಾಹನಗಳು ದುಬಾರಿ|Speed News Kannada

EV vehicles will be expensive in Karnataka from now on|ಇನ್ಮುಂದೆ ಕರ್ನಾಟಕದಲ್ಲಿ ಇವಿ ವಾಹನಗಳು ದುಬಾರಿ|Speed News Kannada

ಪರಿಸರ ಸ್ನೇಹಿಯಾದ ಎಲೆಕ್ಟ್ರಿಕ್‌ ವಾಹನಗಳು ಇನ್ಮುಂದೆ ದುಬಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಪರಿಸರ ಸ್ನೇಹಿ ಆದ ಎಲೆಕ್ಟ್ರಿಕ್‌ ವಾಹನಗಳಿಗೆ ಈ ಹಿಂದೆ ಹತ್ತು ವರ್ಷಗಳ ತೆರಿಗೆ ವಿನಾಯಿತಿಯನ್ನು ನೀಡಲಾಗಿತ್ತು ಆದ್ರೆ ಈಗ ಈ ವಿನಾಯಿತಿಯನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ‘ಕರ್ನಾಟಕ ಮೋಟಾರು ವಾಹನ ತೆರಿಗೆ ವಿಧೇಯಕ 2026’ಕ್ಕೆ ಈಗಾಗಲೇ ಅನುಮೋದನೆ ಪಡೆಯಲಾಗಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಈ ಹೊಸ ನೀತಿಯ ಪ್ರಕಾರ ಎಲೆಕ್ಟ್ರಿಕ್‌ ವಾಹನಗಳ ಬೆಲೆಯ ಆಧಾರದ ಮೇಲೆ ಅವುಗಳ ತೆರಿಗೆಯನ್ನು ವಿಧಿಸಲಾಗುತ್ತದೆ. 10ಲಕ್ಷ ರೂ ವರೆಗಿನ ಕಾರುಗಳಿಗೆ ಶೇ5ರಷ್ಟು ಹಾಗೂ 25ಲಕ್ಷ ರೂ ಗಿಂತ ಹೆಚ್ಚಿನ ಬೆಲೆಯ ಕಾರುಗಳಿಗೆ ಶೇ 10ರಷ್ಟು ತೆರಿಗೆ ವಿಧಿಸಲಾಗಿದೆ. ಎಲೆಕ್ಟ್ರಿಕ್‌ ದ್ವಿ ಚಕ್ರವಾಹನಗಳಿಗೆ ಯಾವುದೇ ರೀತಿಯ ಅನ್ವಹಿಸುವುದಿಲ್ಲ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.