2026-04-23 08:59:45

Everyone should be provided with protection and equal opportunities: CM Siddaramaiah | ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು: ಸಿಎಂ ಸಿದ್ದರಾಮಯ್ಯ | Speed news kannada

Everyone should be provided with protection and equal opportunities: CM Siddaramaiah | ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು: ಸಿಎಂ ಸಿದ್ದರಾಮಯ್ಯ  | Speed news kannada

ರಾಜ್ಯದಲ್ಲಿರುವ ಎಲ್ಲ ಜನರಿಗೂ ರಕ್ಷಣೆ ಹಾಗೂ ಅವಕಾಶಗಳು ಸಮಾನವಾಗಿ ಸಿಗಬೇಕು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಮೈಸೂರು ಘಟಕದ 46ನೇ ವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡ ಸಿಎಂ, ಎಲ್ಲರಿಗೂ ವೃತ್ತಿಪರ ಯಶಸ್ಸನ್ನು ಕೋರಿ ಶುಭಹಾರೈಸಿ ಮಾತನಾಡಿದರು. ಪೊಲೀಸ್ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿದ್ದು, ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡುವಂತಾದಾಗ ಮಾತ್ರ, ನಿಜಅರ್ಥದಲ್ಲಿ ಸ್ವಾತಂತ್ರ‍್ಯ ದೊರೆತಂತೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ಧಾರೆ. ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವಾಗ ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ. ಕೆಲಸದಲ್ಲಿರುವ ಸಂದರ್ಭದಲ್ಲಿ ಕುಟುಂಬದವರ ಯೋಚನೆ ಮಾಡುವ ಅಗತ್ಯವಿಲ್ಲ. ಸತ್ಯ, ನಿಷ್ಠೆಯಿಂದ ಸೇವೆ ಸಲ್ಲಿಸುತ್ತೀರಿ ಎಂದು ಪೊಲೀಸ್‌ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.