2026-06-08 02:42:58

EVMs are being used instead of ballot papers in the state | ರಾಜ್ಯದಲ್ಲಿ ಮತಪತ್ರ ಬದಲು ಇವಿಎಂ ಬಳಕೆ ಕಾರಣ ಏನು ಗೊತ್ತೇ | Speed News Kannada

EVMs are being used instead of ballot papers in the state | ರಾಜ್ಯದಲ್ಲಿ ಮತಪತ್ರ ಬದಲು ಇವಿಎಂ ಬಳಕೆ ಕಾರಣ ಏನು ಗೊತ್ತೇ | Speed News Kannada

ಬೆಂಗಳೂರು: ಜಾರ್ಖಂಡ್‌ನಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳನ್ನು ಬಳಸಲಾಗಿದ್ದರೂ ಬಿಜೆಪಿ ಮೇಲುಗೈ ಸಾಧಿಸಿರುವುದು ಅಚ್ಚರಿ ಮೂಡಿಸಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಬ್ಯಾಲೆಟ್‌ ಬದಲಿಗೆ ಮತಯಂತ್ರಗಳನ್ನು (ಇವಿಎಂ) ಬಳಸಲಾಗುತ್ತದೆಯೇ ಎಂಬ ಶಂಕೆ ಮೂಡಿದೆ.
ಇವಿಎಂ ಗಳ ಬಗ್ಗೆ ಕಾಂಗ್ರೆಸ್‌ ಸಂಶಯ ವ್ಯಕ್ತಪಡಿಸಿತ್ತು. ಇವಿಎಂ ಗಳನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ಸಂಶಯ ವ್ಯಕ್ತಪಡಿಸಿತ್ತು.ಹಾಗಾಗಿ  ಮುಂಬರುವ ಜಿಬಿಎ, ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಸಲು ರಾಜ್ಯ ಕಾಂಗ್ರೆಸ್‌ ಸರ್ಕಾರ ತೀರ್ಮಾನಿಸಿತ್ತು. 
ಹೀಗಾಗಿಯೇ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌(ತಿದ್ದುಪಡಿ) ವಿಧೇಯಕ 2025ಕ್ಕೆ ತಿದ್ದುಪಡಿ ಮಾಡಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್‌ನಲ್ಲಿ ಚುನಾವಣೆ ನಡೆಸಲು ಆಯೋಗಕ್ಕೂ ಸೂಚನೆ ನೀಡಲಾಗಿದೆ.
ಇದೇ ಮಾದರಿಯಲ್ಲಿ ಜಾರ್ಖಂಡ್‌ ನಲ್ಲಿ ಅಧಿಕಾರದಲ್ಲಿರುವ ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್‌ ಪೇಪರ್‌ ಪರಿಚಯಿಸಿತ್ತು. ಇಂಡಿಯಾ ಮೈತ್ರಿಕೂಟವನ್ನು ಹಿಂದಿಕ್ಕಿ ಜಾರ್ಖಂಡ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಿದೆ.
ಒಂದು ಹಂತದಲ್ಲಿ ಇವಿಎಂ ಬಳಕೆ ಕುರಿತು ಇದ್ದ ಸಂಶಯ ನಿವಾರಣೆಯಾದಂತಾಗಿದೆ. ಹಾಗಾಗಿ ಸರ್ಕಾರ ಮರುಚಿಂತನೆ ನಡೆಸಲಿದೆಯೇ ಎಂಬ ಅನುಮಾನ ಕಾಡುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.