2026-06-08 01:25:47

Famous actress dies under suspicious circumstances at age 29 | 29ನೇ ವಯಸ್ಸಿಗೆ ಖ್ಯಾತ ನಟಿ ಅನುಮಾನಾಸ್ಪದ ಸಾವು | Speed news kannada

Famous actress dies under suspicious circumstances at age 29 | 29ನೇ ವಯಸ್ಸಿಗೆ ಖ್ಯಾತ ನಟಿ ಅನುಮಾನಾಸ್ಪದ ಸಾವು | Speed news kannada

ಹರಿಯಾಣದ ಜನಪ್ರಿಯ ನಟಿ ಮತ್ತು ಡ್ಯಾನ್ಸರ್ ದಿವ್ಯಾಂಕಾ ಸಿರೋಹಿ ಅವರು ಮಂಗಳವಾರ (ಏಪ್ರಿಲ್ 21) ಗಾಜಿಯಾಬಾದ್‌ನ ರಾಜನಗರ ಎಕ್ಸ್‌ಟೆನ್ಶನ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 29 ವರ್ಷ ವಯಸ್ಸಾಗಿತ್ತು. ಚಿಕ್ಕ ವಯಸ್ಸಿನಲ್ಲಿ ಅವರ ಸಾವು ಸಂಭವಿಸಿರುವುದು ಚಿತ್ರರಂಗ ಮತ್ತು ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ದಿವ್ಯಾಂಕಾ ಅವರ ಸಾವಿನ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಸಾವಿನ ಬಗ್ಗೆ ಅನುಮಾನ ಮೂಡಿದೆ. ಬುಧವಾರ (ಏಪ್ರಿಲ್ 22) ಬೆಳಿಗ್ಗೆ ಗಾಜಿಯಾಬಾದ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ದಿವ್ಯಾಂಕಾ ನಿಧನದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರ ಸಹೋದರ ಹಿಮಾಂಶು, ‘ಮಂಗಳವಾರ ದಿವ್ಯಾಂಕಾ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿತು. ಅವರು ಮನೆಯಲ್ಲೇ ಕೆಳಗೆ ಬಿದ್ದಿದ್ದರಿಂದ ತಲೆಗೆ ಬಲವಾದ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು’ ಎಂದು ತಿಳಿಸಿದ್ದಾರೆ.

ಚಿತ್ರರಂಗದ ಅನೇಕ ಗಣ್ಯರು ಮತ್ತು ಅಭಿಮಾನಿಗಳು ದಿವ್ಯಾಂಕಾ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಪ್ರತಿಭಾವಂತ ಕಲಾವಿದೆಯೊಬ್ಬರು ಇಷ್ಟು ಬೇಗ ನಿಧನರಾಗಿರುವುದು ಹರಿಯಾಣದ ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಜನರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.