2026-04-23 10:53:23

Farmer commits suicide after being threatened by Gram Panchayat members | ಗ್ರಾಮ ಪಂಚಾಯತ್ ಸದಸ್ಯರಿಂದ ಧಮ್ಮಿ ಸುಳ್ಳು ಕೇಸ್‌ಗೆ ಬೆದರಿ ರೈತ ಆತ್ಮಹ*ತ್ಯೆ | Speed News Kannada

Farmer commits suicide after being threatened by Gram Panchayat members | ಗ್ರಾಮ ಪಂಚಾಯತ್ ಸದಸ್ಯರಿಂದ ಧಮ್ಮಿ ಸುಳ್ಳು ಕೇಸ್‌ಗೆ ಬೆದರಿ ರೈತ ಆತ್ಮಹ*ತ್ಯೆ | Speed News Kannada

ಹುಬ್ಬಳ್ಳಿ : ಇಲ್ಲಿನ ಉಮಚಗಿ ಗ್ರಾಮದಲ್ಲಿ ರೈತ ನಿಂಗಪ್ಪ ಅಂಗಡಿ (48) ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ರಸ್ತೆ ವಿಚಾರವಾಗಿ ಉಂಟಾದ ತಕರಾರು ಈ ಘಟನೆಗೆ ಕಾರಣ ಎನ್ನಲಾಗಿದೆ. ಈ ವಿಚಾರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆ ರೈತ ನಿಂಗಪ್ಪ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಯ ಉಮಚಗಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನಿಂಗಪ್ಪ ನಡುವೆ ವಾಗ್ವಾದ ನಡೆದಿದ್ದು ರಸ್ತೆ ವಿಚಾರಕ್ಕೆ ತಗಾದೆ ಶುರುವಾಗಿದೆ. ಆದ್ರೆ ಈ ವೇಳೆ ಗ್ರಾ.ಪಂ ಸದಸ್ಯರು ಅಟ್ರಾಸಿಟಿ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಇದ್ರಿಂದ ನಿಂಗಪ್ಪ ಚಿಂತೆಗೀಡಾಗಿದ್ದ ಎನ್ನಲಾಗಿದೆ. ಹೀಗಾಗಿ ಇದೇ ಆತಂಕದಲ್ಲಿ ತನ್ನ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ರೈತ ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.