2026-06-25 02:03:56

Farmer commits suicide | ರಾಜ್ಯದಲ್ಲಿ ಸಾಲಬಾಧೆಗೆ ರೈತ ಬಲಿ ರಾಯಚೂರಲ್ಲಿ ಕೆರೆಗೆ ಹಾರಿ ರೈತ ಆತ್ಮಹತ್ಯೆಗೆ ಶರಣು | Speed News Kannada

Farmer commits suicide | ರಾಜ್ಯದಲ್ಲಿ ಸಾಲಬಾಧೆಗೆ ರೈತ ಬಲಿ ರಾಯಚೂರಲ್ಲಿ ಕೆರೆಗೆ ಹಾರಿ ರೈತ ಆತ್ಮಹತ್ಯೆಗೆ ಶರಣು | Speed News Kannada

ರಾಯಚೂರು : ರಾಜ್ಯದಲ್ಲಿ ಸಾಲಭಾದೇ ತಳಲಾರದೆ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಭಾದೆ ತಾಳಲಾರದೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ರೌಡಕುಂದಾ ಗ್ರಾಮದಲ್ಲಿ ಜರುಗಿದೆ.
ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಬಳಿ ಕೆರೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.ರೈತ ಹನುಮಂತ ವಿರುಪಾಕ್ಷಪ್ಪ ಡಮಾಣಿ (44) ಆತ್ಮಹತ್ಯೆಗೆ ಶರಣಾದ ರೈತ ಎಂದು ತಿಳಿದುಬಂದಿದೆ. ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ರೈತನಿಗೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಸುಮಾರು 10 ಲಕ್ಷ ರೂ ಹಾಗೂ ಖಾಸಗಿಯಾಗಿ 10 ರಿಂದ 12 ಲಕ್ಷ ರೂ.ಗಳ ಸಾಲ ಇತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಈ ಕುರಿತು ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಂಧನೂರು ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.