ಕುಣಿಗಲ್‌ನ ಆಲ್ಕೆರೆ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಸಂಭವಿಸಿದೆ. ಪತ್ನಿಯ ಅಕ್ರಮ ಸಂಬಂಧ ಹಾಗೂ ಮನೆಯಲ್ಲಿದ್ದ ಚಿನ್ನಾಭರಣದೊಂದಿಗೆ ಆಕೆ ಪದೇ ಪದೇ ಪರಾರಿಯಾಗುತ್ತಿದ್ದರಿಂದ ಬೇಸತ್ತ ಶಿವಣ್ಣ ಎಂಬುವವರು ಈ ಭೀಕರ ನಿರ್ಧಾರ ಕೈಗೊಂಡಿದ್ದಾರೆ.
ಕಳೆದ ವಾರವಷ್ಟೇ ಪ್ರಿಯಕರನ ಜೊತೆ ಓಡಿಹೋಗಿದ್ದ ಪತ್ನಿಯನ್ನು ಪೊಲೀಸರು ಮಧ್ಯಸ್ಥಿಕೆ ವಹಿಸಿ ಮನೆಗೆ ಕರೆತಂದಿದ್ದರು. ಆದರೆ, ಮರುದಿನವೇ ಆಕೆ ಮತ್ತೆ ಹಣ, ಒಡವೆಯೊಂದಿಗೆ ನಾಪತ್ತೆಯಾಗಿದ್ದಾಳೆ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಶಿವಣ್ಣ, ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ವಿಷಯ ತಿಳಿದ ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಡೀ ಗ್ರಾಮದಲ್ಲಿ ಘಟನೆಯಿಂದಾಗಿ ಶೋಕ ಮಡುಗಟ್ಟಿದೆ.