2026-07-23 09:14:05

Father commits suicide after killing two children, fed up with wife behavior|ಪತ್ನಿಯ ನಡತೆಗೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ|Speed News Kannada

Father commits suicide after killing two children, fed up with wife behavior|ಪತ್ನಿಯ ನಡತೆಗೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ|Speed News Kannada

ಕುಣಿಗಲ್‌ನ ಆಲ್ಕೆರೆ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಸಂಭವಿಸಿದೆ. ಪತ್ನಿಯ ಅಕ್ರಮ ಸಂಬಂಧ ಹಾಗೂ ಮನೆಯಲ್ಲಿದ್ದ ಚಿನ್ನಾಭರಣದೊಂದಿಗೆ ಆಕೆ ಪದೇ ಪದೇ ಪರಾರಿಯಾಗುತ್ತಿದ್ದರಿಂದ ಬೇಸತ್ತ ಶಿವಣ್ಣ ಎಂಬುವವರು ಈ ಭೀಕರ ನಿರ್ಧಾರ ಕೈಗೊಂಡಿದ್ದಾರೆ.

ಕಳೆದ ವಾರವಷ್ಟೇ ಪ್ರಿಯಕರನ ಜೊತೆ ಓಡಿಹೋಗಿದ್ದ ಪತ್ನಿಯನ್ನು ಪೊಲೀಸರು ಮಧ್ಯಸ್ಥಿಕೆ ವಹಿಸಿ ಮನೆಗೆ ಕರೆತಂದಿದ್ದರು. ಆದರೆ, ಮರುದಿನವೇ ಆಕೆ ಮತ್ತೆ ಹಣ, ಒಡವೆಯೊಂದಿಗೆ ನಾಪತ್ತೆಯಾಗಿದ್ದಾಳೆ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಶಿವಣ್ಣ, ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ವಿಷಯ ತಿಳಿದ ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಡೀ ಗ್ರಾಮದಲ್ಲಿ ಘಟನೆಯಿಂದಾಗಿ ಶೋಕ ಮಡುಗಟ್ಟಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.