2026-06-25 03:39:01

Filed a complaint against doctor | ಉತ್ಪನ್ನದ ಬಗ್ಗೆ ಅಪಪ್ರಚಾರ ವೈದ್ಯೆಯ ವಿರುದ್ಧ ದೂರು ದಾಖಲು | Speed News Kannada

Filed a complaint against doctor | ಉತ್ಪನ್ನದ ಬಗ್ಗೆ ಅಪಪ್ರಚಾರ ವೈದ್ಯೆಯ ವಿರುದ್ಧ ದೂರು ದಾಖಲು | Speed News Kannada

ಬೆಂಗಳೂರು : ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚರ್ಮರೋಗ ತಜ್ಞೆ ಡಾ. ಶರಣ್ಯ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.ಪದ್ಮಾವತಿ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ 353(1)(ಬಿ) ಅಡಿಯಲ್ಲಿ ಸುಳ್ಳು ಮಾಹಿತಿ ಹರಡಿದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಶರಣ್ಯ ಅವರು ಫೆಬ್ರವರಿ 8ರಂದು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಪ್ರಕಟಿಸಿ ನಂದಿನಿ ಉತ್ಪನ್ನಗಳ ಬಗ್ಗೆ ಆರೋಪಗಳನ್ನು ಮಾಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಸ್ಪಷ್ಟನೆ ನೀಡಿತ್ತು.
ರೀಲ್ಸ್‌ನಲ್ಲಿ ಮಾಡಿದ್ದ ಆರೋಪಗಳು
ರೀಲ್ಸ್‌ನಲ್ಲಿ ನಂದಿನಿಯ ಕ್ರೀಮ್ ಬನ್, ಸ್ಟ್ರಾಬೆರಿ ಪ್ಲೇವರ್ಡ್ ಮಿಲ್ಕ್ ಹಾಗೂ ಸ್ಪಾಶ್ ಪಾನೀಯಗಳು ವಿಷಕಾರಿ ಮತ್ತು ರಾಸಾಯನಿಕ ಅಂಶಗಳನ್ನು ಒಳಗೊಂಡಿವೆ ಎಂದು ವೈದ್ಯ ಹೇಳಿದ್ದರು. ಇವುಗಳನ್ನು ದೀರ್ಘಾವಧಿಯಲ್ಲಿ ಸೇವಿಸಿದರೆ ಭವಿಷ್ಯದಲ್ಲಿ ಕ್ಯಾನ್ಸರ್ ಸಂಭವಿಸುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿದ್ದರು.
ಉತ್ಪನ್ನಗಳಲ್ಲಿ ನೈಸರ್ಗಿಕ ಪದಾರ್ಥಗಳ ಬದಲು ಕೃತಕ ಬಣ್ಣಗಳನ್ನು ಬಳಕೆ ಮಾಡಲಾಗಿದೆ ಎಂದು ಆರೋಪಿಸಿದ್ದು, ಇಂತಹ ಉತ್ಪನ್ನಗಳಿಗೆ ಎಫ್‌ಎಸ್‌ಎಸ್‌ಎಐ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದರು.
ಕೆಎಂಎಫ್ ಸರ್ಕಾರದ ಸ್ವಾಮ್ಯದಲ್ಲಿರುವ ಸಂಸ್ಥೆಯಾಗಿದ್ದು, ಉತ್ಪಾದನೆ ಹಾಗೂ ಮಾರಾಟದ ಮೂಲಕ ಲಾಭ ಗಳಿಸುವ ಭ್ರಮೆಯಲ್ಲಿ ಸರ್ಕಾರ ಇದೆ. ಆದ್ದರಿಂದ ಇಂತಹ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡಬಾರದು ಎಂದು ಅವರು ವಿಡಿಯೋದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.