2026-06-25 03:40:10

FIR against mahesh shetty Timarodi | ಯಕ್ಷಗಾನ ಕಲಾವಿದರಿಗೆ ನಿಂದನೆ, ಬೆದರಿಕೆ ಆರೋಪ, ತಿಮರೋಡಿ ವಿರುದ್ಧ FIR | Speed news kannada

FIR against mahesh shetty Timarodi | ಯಕ್ಷಗಾನ ಕಲಾವಿದರಿಗೆ ನಿಂದನೆ, ಬೆದರಿಕೆ ಆರೋಪ, ತಿಮರೋಡಿ ವಿರುದ್ಧ FIR | Speed news kannada

ಧರ್ಮಸ್ಥಳ ಪ್ರಕರಣದ ಮೂಲಕ ರಾಜ್ಯದ ಗಮನ ಸೆಳೆದಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇದೀಗ ಮತ್ತೊಮ್ಮೆ ವಿವಾದಕ್ಕೆ ಒಳಗಾಗಿದ್ದಾರೆ.  ʼಬುರುಡೆ ಗ್ಯಾಂಗ್‌ʼ ಯಕ್ಷಗಾನ ಪ್ರಸಂಗ ಸಂಬಂಧ ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಬೆದರಿಕೆ ಆರೋಪಗಳು ಕೇಳಿಬಂದಿವೆ. ಧರ್ಮಸ್ಥಳ ಪ್ರಕರಣವನ್ನೇ ಹೋಲುವು ಕಥೆ ಹೊಂದಿರುವ ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ನಿರ್ಮಾಣ ಮಾಡಲಾಗಿತ್ತು. ಇದನ್ನು ತಿಳಿದ ಮಹೇಶ್ ಶೆಟ್ಟಿ ತಿಮರೋಡಿ, ಏಪ್ರಿಲ್ 11ರಂದು ಯಕ್ಷಗಾನ ಹಾಸ್ಯ ಕಲಾವಿದ ಪ್ರಜ್ವಲ್ ಗುರುನಾಯನಕೆರೆಗೆ ದೂರವಾಣಿ ಕರೆ ಮಾಡಿದ್ದರು. ಈ ವೇಳೆ ಕಲಾವಿದರಾದ ದಿನೇಶ್ ಶೆಟ್ಟಿಗಾರ್ ಮತ್ತು ಚಿತ್ರನಟ ಮಂದಾರ ಸುಂದರ ರೈ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದಲ್ಲದೆ, ಅವರ ಕುಟುಂಬದವರ ಬಗ್ಗೆ ಕೂಡ ಅಸಭ್ಯವಾಗಿ ಮಾತನಾಡಿದ್ದಾರೆ. ಈ ಹಿನ್ನೆಲೆ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ತಿಮರೋಡಿ ವಿರುದ್ಧ FIR ದಾಖಲಾಗಿದ್ದರೆ, ದಿನೇಶ್ ಶೆಟ್ಟಿಗಾರ್ ತಾಯಿ ಲೀಲಾವತಿ ಶೆಟ್ಟಿಗಾರ್ ದೂರಿನಡಿ ಮಹಿಳಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.