ನಟ ಚೇತನ್ ಅಹಿಂಸಾ ನೀಡಿದ ದೂರಿನ ಆಧಾರದ ಮೇಲೆ ನಿರ್ಮಾಪಕ ಸಾ.ರಾ ಗೋವಿಂದ ಸೇರಿದಂತೆ ಕೆಲವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಮನೆ ಮುಂದೆ ಗಲಾಟೆ ಹಾಗೂ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಚೇತನ್ ಅಹಿಂಸಾ ಆರೋಪದ ಪ್ರಕಾರ, ಕಳೆದ ಶನಿವಾರ ಆರೋಪಿಗಳು ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ವಿವಾದ ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ.