2026-06-25 02:06:41

FIR Against Samar International Islamic School! | ಸಾಲು ಸಾಲು ಆರೋಪ -ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ವಿರುದ್ಧ ಎಫ್‌ಐಆರ್.! | Speed News Kannada

 FIR Against Samar International Islamic School! | ಸಾಲು ಸಾಲು ಆರೋಪ -ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ವಿರುದ್ಧ ಎಫ್‌ಐಆರ್.! | Speed News Kannada

ಬೆಂಗಳೂರಿನ:  ಥಣಿಸಂದ್ರದಲ್ಲಿರುವ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಆಡಳಿತಾಧಿಕಾರಿ ಖಾಲಿದ್ ವಿರುದ್ಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿ ಗೋವಿಂದಪ್ಪ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದೆ.ದೂರಿನ ಪ್ರಕಾರ, ಶಾಲೆಯ ಆಡಳಿತ ಮಂಡಳಿ ಶಿಕ್ಷಣ ಇಲಾಖೆಗೆ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಶಾಲೆಯ ನೋಂದಣಿ ಹಾಗೂ ಮಾನ್ಯತೆ ನವೀಕರಣವನ್ನು ಪಡೆದುಕೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನೋಂದಣಿ ಮಾಡಿರುವ ಹೆಸರು ಒಂದಾಗಿದ್ದು, ಶಾಲೆಯನ್ನು ನಡೆಸುತ್ತಿರುವ ಹೆಸರು ಮತ್ತೊಂದಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ನೋಂದಣಿಯಾಗಿರುವ ಹೆಸರಿನಲ್ಲಿ ಶಾಲಾ ಶುಲ್ಕದ ರಸೀದಿಯನ್ನು ಪೋಷಕರಿಗೆ ನೀಡದೆ ವಂಚನೆ ನಡೆಸಲಾಗಿದೆ ಎಂಬ ಆರೋಪವೂ ಇದೆ. ಈ ಎಲ್ಲ ಅಂಶಗಳ ಆಧಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಅದರ ಬೆನ್ನಲ್ಲೇ ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಈಗಾಗಲೇ ಪೋಷಕರು ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿರುವ ಹಿನ್ನೆಲೆ ಇದೆ. ಸುಳ್ಳು ದಾಖಲೆಗಳ ಮೂಲಕ ಶಾಲೆ ನಡೆಸುತ್ತಿರುವ ಆರೋಪದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.