2026-06-08 01:33:09

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ |Speed News Kannada

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ |Speed News Kannada

ಕೋಲ್ಕತ್ತ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ವಕೀಲೆ ರಿಂಕಿ ಚಟ್ಟೋಪಾಧ್ಯಾಯ ಸಿಂಗ್ ಅವರು ಮೇ 20ರಂದು ಸಿಲಿಗುರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಲು ನಿರಾಕರಿಸಿದ್ದರು. ಸತತ ಪ್ರಯತ್ನಗಳ ನಂತರವಷ್ಟೇ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಮತಾ ಅವರು 2025ರಲ್ಲಿ ನಡೆದ ಧಾರ್ಮಿಕ ಸಮಾರಂಭವೊಂದರಲ್ಲಿ ನೀಡಿದ ಹೇಳಿಕೆ ಹಾಗೂ ವಿಧಾನಸಭಾ ಚುನಾವಣೆಗೆ ಮುನ್ನ ಧರ್ಮತಲಾದಲ್ಲಿ ನಡೆದ ಪ್ರತಿಭಟನೆಯಲ್ಲಿ ನೀಡಿದ ಹೇಳಿಕೆಗಳು ದೇಶ ಮತ್ತು ವಿಶ್ವದಾದ್ಯಂತ ಇರುವ ಲಕ್ಷಾಂತರ ಹಿಂದೂಗಳ ಭಾವನೆಗಳು ಮತ್ತು ನಂಬಿಕೆಗಳಿಗೆ ತೀವ್ರ ನೋವುಂಟು ಮಾಡಿವೆ ಎಂದು ಅವರು ದೂರಿನಲ್ಲಿ ಆಪಾದಿಸಿದ್ದಾರೆ.

ಈ ಹೇಳಿಕೆಗಳು ಸಂವಿಧಾನ ವಿರೋಧಿ ಮತ್ತು ಪ್ರಚೋದನಾತ್ಮಕ ಸ್ವರೂಪದ್ದಾಗಿವೆ ಎಂದು ವಕೀಲೆ ಆರೋಪಿಸಿದ್ದಾರೆ. ಒಂದು ನಿರ್ದಿಷ್ಟ ಸಮುದಾಯವು ಬಯಸಿದರೆ ಕೇವಲ ಐದು ನಿಮಿಷಗಳಲ್ಲಿ ಇತರರನ್ನು 'ಮುಗಿಸಿಬಿಡಬಹುದು' ಎಂದು ಬ್ಯಾನರ್ಜಿ ಹೇಳಿದ್ದಾರೆ. ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯಿಂದ ಅಂತಹ ಹೇಳಿಕೆಗಳನ್ನು ನಿರೀಕ್ಷಿಸಲಾಗದು ಎಂದು ವಕೀಲೆ ರಿಂಕಿ ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮಮತಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಸಿಲಿಗುರಿ ಪೊಲೀಸ್ ಕಮಿಷನರೇಟ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.