2026-07-23 08:17:03

Fire at illegal firecracker factory | ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ 7 ಕಾರ್ಮಿಕರು ಸಾವು | Speed News Kannada

Fire at illegal firecracker factory | ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ 7 ಕಾರ್ಮಿಕರು ಸಾವು | Speed News Kannada

ಭಿವಾಡಿ: ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿನ ಅಕ್ರಮ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಏಳು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೊರನೋಟಕ್ಕೆ ಅದೊಂದು ಗಾರ್ಮೆಂಟ್ಸ್‌ ಕಾರ್ಖಾನೆ. ಆದರೆ ಕಾಖಾನೆಯಲ್ಲಿ ಅಕ್ರಮವಾಗಿ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತು. ಕಾರ್ಖಾನೆಯಲ್ಲಿ ಇನ್ನೂ ಇಬ್ಬರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾರ್ಮೆಂಟ್ ಕಾರ್ಖಾನೆಯ ಹೆಸರಿನಲ್ಲಿ ಶೆಡ್‌ ಅನ್ನುಗುತ್ತಿಗೆಗೆ ನೀಡಲಾಗಿತ್ತು. 
ಗಸ್ತು ತಿರುಗುತ್ತಿದ್ದ ಪೊಲೀಸರು ಬೆಂಕಿ ಅವಘಡವನ್ನು ಗಮನಿಸಿದ್ದಾರೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.
ಕಾರ್ಖಾನೆಯೊಳಗೆ 20 ಕ್ಕೂ ಹೆಚ್ಚು ಕಾರ್ಮಿಕರಿದ್ದರು. ಬೆಂಕಿ ಹೊತ್ತಿಕೊಂಡ ತಕ್ಷಣ, ಅನೇಕ ಕಾರ್ಮಿಕರು ಹೊರಬಂದರು. ಆದರೆ ಒಂಬತ್ತು ಮಂದಿ ಒಳಗಡೆ ಸಿಲುಕಿಕೊಂಡರು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಒಂದೂವರೆ ಗಂಟೆಗೂ ಹೆಚ್ಚು ಕಾಲದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.