2026-06-25 02:07:24

Fire breaks out due to cylinder leak at home | ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ದಂಪತಿ ಸ್ಥಿತಿ ಗಂಭೀರ | Speed News Kannada

Fire breaks out due to cylinder leak at home | ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ದಂಪತಿ ಸ್ಥಿತಿ ಗಂಭೀರ | Speed News Kannada

ಚಾಮರಾಜನಗರ: ಮನೆಯಲ್ಲಿ ಅಡುಗೆ ಸಿಲಿಂಡ‌ರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ರೈಲ್ವೆ ಬಡಾವಣೆಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಈ ಅವಘಡ ಸಂಭವಿಸಿದೆ. ಸಿ.ಪರಮೇಶ್ ಹಾಗೂ ಮಂಜುಳಾ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ದವಸ-ಧಾನ್ಯ, ಪೀಠೋಪಕರಣಗಳು, ಇತರ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಗಾಯಾಳು ದಂಪತಿಗಳ ಸ್ಥಿತಿ ಗಂಭೀರವಾಗಿದೆ. ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.