2026-07-23 11:20:46

Fire breaks out in Biligiri Rangana Hill | ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ | Speed News Kannada

Fire breaks out in Biligiri Rangana Hill | ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ | Speed News Kannada

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲೂಕಿನ ಲಕ್ಕೊನಹಳ್ಳಿ ಬಳಿ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬರೋಬ್ಬರಿ ೫೦ಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿಕೊಂಡಿದೆ. ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗುತ್ತಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಒಂದೆಡೆ ಬಿಸಿಲ ಝಳ, ಮತ್ತೊಂದೆಡೆ ಬೆಂಕಿ ಅರಣ್ಯ ಪ್ರದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಬೆಂಕಿ ನಿಯಂತ್ರಿಸಲು ಸಿಬ್ಬಂದಿಗಳು ಜರಸಾಹಸ ಪಡುತ್ತಿದ್ದಾರೆ. ಕಿಡಿಗೇಡಿಗಳು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ ಸ್ಥಳಕ್ಕೆ ಬಿ ಆರ್ ಟಿ ಮುಖ್ಯಸ್ಥ ಶ್ರೀಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.