2026-05-11 04:59:50

fire to turkish airlines flight tyre; what happens next?| ಟರ್ಕಿಶ್ ಏರ್‌ ಲೈನ್ಸ್ ವಿಮಾನದ ಟೈರ್‌ ಬೆಂಕಿ; ಮುಂದೇನಾಯ್ತು? | Speed News Kannada

fire to turkish airlines flight tyre; what happens next?| ಟರ್ಕಿಶ್ ಏರ್‌ ಲೈನ್ಸ್ ವಿಮಾನದ ಟೈರ್‌ ಬೆಂಕಿ; ಮುಂದೇನಾಯ್ತು? | Speed News Kannada

ಕಠ್ಮಂಡು: ಟರ್ಕಿಶ್ ಏರ್‌ ಲೈನ್ಸ್ ವಿಮಾನ ನಿಲುಗಡೆಯಾಗುವಾಗ ಟೈರ್‌ಗೆ ಬೆಂಕಿ ಹೊತ್ತಿಕೊಂಡ ಆಘಾತಕಾರಿ ಘಟನೆ ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನಡೆದಿದೆ. ಇಂದು ಬೆಳಗ್ಗೆ ಈ ದುರಂತ ನಡೆದಿದ್ದು, ಅದೃಷ್ಟವಶಾತ್‌ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟೈರ್‌ ಗೆ ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ತ್ವರಿತವಾಗಿ ನಿಯಂತ್ರಣಕ್ಕೆ ತರಲಾಗಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಈ ವಿಮಾನವು ಇಸ್ತಾನ್‌ಬುಲ್‌ನಿಂದ ಕಠ್ಮಂಡುವಿಗೆ ಆಗಮಿಸುತ್ತಿತ್ತು. ಲ್ಯಾಂಡಿಂಗ್ ಸಮಯದಲ್ಲಿ ಟೈರ್‌ಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅವಘಡ ಸಂಭವಿಸಿದಾಗ ವಿಶ್ವಸಂಸ್ಥೆಯ ಹಲವಾರು ಪ್ರತಿನಿಧಿಗಳೂ ಸೇರಿ ವಿಮಾನದಲ್ಲಿ 278 ಪ್ರಯಾಣಿಕರು, 11 ಸಿಬ್ಬಂದಿ ಇದ್ದರು. ತುರ್ತು ರಕ್ಷಣಾ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡ ಪರಿಣಾಮ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ವಿಮಾನದ ಟೈರ್‌ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಈ ನಿಟ್ಟಿನಲ್ಲಿ ತನಿಖೆ ಆರಂಭವಾಗಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.