ಹಾಸನ: ಕಾರಿನಲ್ಲಿ ಮಾದಕ ವಸ್ತುಗಳನ್ನು (Drug) ಸಾಗಿಸುತ್ತಿದ್ದ ಜಾಲವನ್ನು ಹಾಸನದ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹಾಸನದ ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ ರೂ.2 ಲಕ್ಷಕ್ಕೂ ಅಧಿಕವೆಂದು ಅಂದಾಜಿಸಲಾಗಿದೆ. ಹಾಸನದ ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಸಂಚರಿಸುತ್ತಿದ್ದ ಎರ್ಟಿಗಾ ಕಾರನ್ನು ತಪಾಸಣೆ ನಡೆಸಿದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಶಿವಮೊಗ್ಗ ಮೂಲದ ಫರ್ವೀಜ್ (29), ಸುಹೇಲ್ (24), ಅಬ್ದುಲ್ ಯಾಸಿನ್ (20), ಇಬ್ರತ್ ಖಾನ್ (24) ಹಾಗೂ ಹಾಸನದ ಸೈಯದ್ ಯೂಸಫ್ (23) ಎಂದು ಗುರುತಿಸಲಾಗಿದೆ.
ನಾಲ್ವರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಒಬ್ಬ ಹಾಸನ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. 40 ಗ್ರಾಂ ಎಂಡಿಎಂಎ ಹಾಗೂ ಆರೋಪಿಗಳು ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ ರೂ.2 ಲಕ್ಷಕ್ಕೂ ಅಧಿಕವೆಂದು ಅಂದಾಜಿಸಲಾಗಿದೆ.ಇನ್ನು ಚಿಕ್ಕಮಗಳೂರಿನಲ್ಲೂ 5 ಕೆ.ಜಿ ಗೂ ಹೆಚ್ಚು ಗಾಂಜಾ ವಶಪಡಿಸಿಕೊಳ್ಳಾಗಿದೆ. ಖಚಿತ ಮಾಹಿತಿ ಮೇರೆಗೆ ರೈಲ್ವೆ ನಿಲ್ದಾಣದ ಸಮೀಪ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿ 5 ಕೆ.ಜಿ 850 ಗ್ರಾಂ ಗಾಂಜಾವನ್ನು ಸೀಜ್ ಮಾಡಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು ಮೂರು ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಬೆಂಗಳೂರಿನ ನಿವಾಸಿಯಾಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.