2026-06-08 01:25:12

Flight 91 once again shocked passengers | ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ ಫ್ಲೈ 91 ವಿಮಾನ | Speed news kannada

Flight 91 once again shocked passengers | ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ ಫ್ಲೈ 91 ವಿಮಾನ | Speed news kannada

ಹವಾಮಾನ ವೈಪರಿತ್ಯದಿಂದ ಹುಬ್ಬಳ್ಳಿಯಲ್ಲಿ ಮತ್ತೊಂದು ವಿಮಾನ ಪ್ರಯಾಣಿಕರ ಎದಯಲ್ಲಿ ನಡುಕವನ್ನು ಹುಟ್ಟಿಸಿದೆ. ಬೆಂಗಳೂರು–ಹುಬ್ಬಳ್ಳಿ ಪ್ರಯಾಣ ಬೆಳೆಸುತ್ತಿದ್ದ Fly91 ಸಂಸ್ಥೆಯ ವಿಮಾನವು ಹವಾಮಾನ ವೈಪರೀತ್ಯದಿಂದ ಸುಮಾರು 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲೇ ಗಿರಕಿ ಹೊಡೆದಿರುವ ಘಟನೆ ಮಂಗಳವಾರ ಸಂಜೆ ಹುಬ್ಬಳ್ಳಿಯಲ್ಲಿ ನಡೆದಿದೆ. ವಿಮಾನವು ನಿಗದಿತ ವೇಳೆಗೆ ರಾತ್ರಿ 8.15ಕ್ಕೆ ಹುಬ್ಬಳ್ಳಿ ತಲುಪಬೇಕಾಗಿದ್ದರೂ, ಲ್ಯಾಂಡಿಂಗ್ ವೇಳೆ ತಾಂತ್ರಿಕ ತೊಂದರೆ ಅಥವಾ ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನಕ್ಕೆ ಕೆಳಗಿಳಿಯಲು ಸಾಧ್ಯವಾಗದೇ ಆಕಾಶದಲ್ಲೇ ಗಿರಕಿ ಹೊಡೆದು ನಂತರ ಸೇಫ್‌ ಆಗಿ ಲ್ಯಾಂಡ್‌ ಆಗಿದೆ. ಈ ಘಟನೆ ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದರೂ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವಿಶೇಷ ಸಂಗತಿಯೆನೆಂದರೆ ಇದೇ ವಿಮಾನವು ಮೂರು ದಿನಗಳ ಹಿಂದೇ ಅಷ್ಟೇ ಇದೇ ರೀತಿ ಘಟನೆ ನಡೆದಿತ್ತು, ಹೈದರಾಬಾದ್‌-ಹುಬ್ಬಳ್ಳಿ ವಿಮಾನವೂ ಹವಮಾನ ವೈಪರೀತ್ಯದಿಂದಾಗಿ ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿ ಬಳಿಕ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿತ್ತು. ಹವಾಮಾನ ವೈಪರೀತ್ಯದ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದರೂ, “ಕೇವಲ ಫ್ಲೈ 91 ವಿಮಾನಕ್ಕೆ ಮಾತ್ರ ಯಾಕೆ ಪದೇ ಪದೇ ತೊಂದರೆಯಾಗುತ್ತಿದೆ?” ಎಂದು ಪ್ರಯಾಣಿಕರು ಪ್ರಶ್ನೆ ಮಾಡುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.