2026-06-08 03:34:19

Foreign investment outflows of Rs 1.14 lakh crore in 27 days | 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು | Speed news kannada

Foreign investment outflows of Rs 1.14 lakh crore in 27 days | 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು | Speed news kannada

ಭಾರತದ ಈಕ್ವಿಟಿಗಳಿಂದ ಮಾರ್ಚ್ ತಿಂಗಳಲ್ಲಿ 12.3 ಬಿಲಿಯನ್ ಡಾಲರ್​ನಷ್ಟು ಎಫ್​ಪಿಐಗಳ ಹೂಡಿಕೆಗಳು ಹೊರಹೋಗಿವೆ. ಅಂದರೆ, ಮಾರ್ಚ್​ನಲ್ಲಿ ಈವರೆಗೂ (27, ಶುಕ್ರವಾರ) 1.14 ಲಕ್ಷ ಕೋಟಿ ರೂ ಈಕ್ವಿಟಿಗಳನ್ನು ವಿದೇಶೀ ಹೂಡಿಕೆದಾರರು ಮಾರಿದ್ದಾರೆ. ಇನ್ನೂ ಎರಡು ಟ್ರೇಡಿಂಗ್ ಸೆಷನ್​ಗಳು ಉಳಿದಿದ್ದು, ಮತ್ತಷ್ಟು ಸಾವಿರಾರು ಕೋಟಿ ರೂ ಎಫ್​ಪಿಐಗಳ (FPI- Foreign Portfolio Investors) ಹೊರಹರಿವು ಆಗುವ ನಿರೀಕ್ಷೆ ಇದೆ. ಮಾರ್ಚ್ ತಿಂಗಳಲ್ಲಿ ಎಫ್​ಪಿಐಗಳು ಸತತವಾಗಿ ಹೂಡಿಕೆಗಳನ್ನು ಹಿಂಪಡೆಯುತ್ತಿದ್ದ ಟ್ರೆಂಡ್ ಇತ್ತು. ಈಕ್ವಿಟಿ ಕ್ಯಾಷ್ ಮಾರ್ಕೆಟ್​ನಲ್ಲಿ ಮಾರ್ಚ್ 27ರವರೆಗೆ ವಿದೇಶೀ ಪೋರ್ಟ್​ಫೋಲಿಯೋ ಹೂಡಿಕೆದಾರರು ಮಾರಿದ ಈಕ್ವಿಟಿಗಳ ಮೌಲ್ಯ 1,13,380 ಕೋಟಿ ರೂ ಎನ್ನಲಾಗಿದೆ. ಇರಾನ್ ಯುದ್ಧದ ಪರಿಣಾಮವು ಮಾರ್ಚ್ ತಿಂಗಳಲ್ಲಿ ಈಕ್ವಿಟಿ ಮಾರುಕಟ್ಟೆ ಮೇಲೆ ತೀವ್ರವಾಗಿ ಬಿದ್ದಿದೆ. ಹಾಗೆಯೇ, ಕಳೆದ 18 ತಿಂಗಳಲ್ಲಿ ಭಾರತದ ಈಕ್ವಿಟಿ ಮಾರುಕಟ್ಟೆಯ ಸಾಧನೆಯು ಇತರ ದೇಶಗಳ ಮಾರುಕಟ್ಟೆಗೆ ಹೋಲಿಸಿದರೆ ದುರ್ಬಲ ಸಾಧನೆ ತೋರಿದೆ. 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.