2026-06-08 02:44:11

Former India batsman Vinod Kambli health condition critical | ಭಾರತದ ಮಾಜಿ ಬ್ಯಾಟರ್ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ | Speed news kannada

Former India batsman Vinod Kambli health condition critical | ಭಾರತದ ಮಾಜಿ  ಬ್ಯಾಟರ್ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ  | Speed news kannada

ಭಾರತದ ಮಾಜಿ ಬ್ಯಾಟರ್‌ ವಿನೋದ್‌ ಕಾಂಬ್ಳಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಸುದ್ದಿಯೊಂದು ಹೊರಬಿದ್ದಿದೆ. ಕಾಂಬ್ಳಿ ಅವರ ಮೆದುಳಿನಲ್ಲಿ ‘ಇನ್-ಆಪರೇಬಲ್’ ರಕ್ತದ ಹೆಪ್ಪುಗಟ್ಟುವಿಕೆ ಇರುವುದು ಪತ್ತೆಯಾಗಿದ್ದು, ಅವರು ಮೆದುಳಿನ ಪಾರ್ಶ್ವವಾಯುವಿಗೆ ಒಳಗಾಗುವ ಅಪಾಯದಲ್ಲಿದ್ದಾರೆ ಎಂದು ಅವರ ಆಪ್ತ ಸ್ನೇಹಿತ ಮತ್ತು ಮಾಜಿ ಅಂಪೈರ್ ಮಾರ್ಕಸ್ ಕೌಟೊ ತಿಳಿಸಿದ್ದಾರೆ. ಭಾರತದ ಪರ 17 ಟೆಸ್ಟ್‌ ಪಂದ್ಯಗಳನ್ನು ಆಡಿದ ವಿನೋದ್‌ ಕಾಂಬ್ಳೆ 2 ದ್ವಿಶತಕ , 4 ಶತಕ ಹಾಗೂ 3 ಅರ್ಧಶತಕಗಳನ್ನು ಕಲೆಹಾಕಿದ್ದರು. ಕಾಂಬ್ಳಿ ಅವರ ಮೆದುಳಿನ ಸೂಕ್ಷ ಜಾಗದಲ್ಲಿ ರಕ್ತ ಹೆಪ್ಪುಗಟ್ಟಿದೆ. ಆದ್ದರಿಂದ ಶಸ್ತ್ರ ಚಿಕಿತ್ಸೆ ಮಾಡುವುದು ಅಪಾಯಕಾರಿಯಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಮುಂಬೈನಲ್ಲಿ ವಿನೋದ್ ಕಾಂಬ್ಳಿ ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.