2026-06-25 03:42:06

Former IPS officer Bhaskar Raos son in law Anirudh Ramesh missing | ಮಾಜಿ ಐಪಿಎಸ್ ಅಧಿಕಾರಿ ಭಾಸ್ಕ‌ರ್ ರಾವ್ ಅಳಿಯ ಅನಿರುದ್ ರಮೇಶ್ ನಾಪತ್ತೆ | Speed News Kannada

Former IPS officer Bhaskar Raos son in law Anirudh Ramesh missing | ಮಾಜಿ ಐಪಿಎಸ್ ಅಧಿಕಾರಿ ಭಾಸ್ಕ‌ರ್ ರಾವ್ ಅಳಿಯ ಅನಿರುದ್ ರಮೇಶ್ ನಾಪತ್ತೆ | Speed News Kannada

ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಸೋದರ ಅಳಿಯ ಅನಿರುದ್ ರಮೇಶ್ ಕಳೆದ ಹತ್ತು ದಿನಗಳಿಂದ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರ ಸಹಾಯ ಕೋರಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರ ಸಂಬಂಧಿ ಅನಿರುದ್, ದಕ್ಷಿಣ ಬೆಂಗಳೂರಿನ ಖ್ಯಾತ ಕಾಲೇಜಿನಲ್ಲಿ ಮನೋವಿಜ್ಞಾನ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಎಲ್ಲೆಡೆ ಶೋಧ ನಡೆಸಿದರೂ ಯಾವುದೇ ಸುಳಿವು ಸಿಗದ ಕಾರಣ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಫೆಬ್ರವರಿ 15ರಂದು ಅನಿರುದ್ ನಾಪತ್ತೆಯಾಗಿದ್ದು, ಹನುಮಂತನಗರ ನಿವಾಸಿ ಎಂದು ತಿಳಿಸಿದ್ದಾರೆ. 32 ವರ್ಷದ, 6 ಅಡಿ 2 ಇಂಚು ಎತ್ತರದ, ಶಾಂತ ಸ್ವಭಾವದ ವ್ಯಕ್ತಿ ಎಂದು ವಿವರ ನೀಡಿದ್ದಾರೆ. 2019-20ರಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ನಂತರ ಸ್ವಯಂ ನಿವೃತ್ತಿ ಪಡೆದು ರಾಜಕೀಯ ಪ್ರವೇಶಿಸಿದ್ದಾರೆ. ಅವರು ಮೊದಲು ಆಮ್ ಆದ್ಮ ಪಾರ್ಟಿ ಸೇರಿ ಬಳಿಕ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯರಾಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.