2026-07-23 12:15:11

Former Mallikarjun shocking statement about Darshan | ದರ್ಶನ್‌ ಬಗ್ಗೆ ಮಾಜಿ ಮಲ್ಲಿಕಾರ್ಜುನ್‌ ಶಾಕಿಂಗ್‌ ಹೇಳಿಕೆ | Speed news kannada

Former Mallikarjun shocking statement about Darshan | ದರ್ಶನ್‌ ಬಗ್ಗೆ ಮಾಜಿ ಮಲ್ಲಿಕಾರ್ಜುನ್‌ ಶಾಕಿಂಗ್‌ ಹೇಳಿಕೆ | Speed news kannada

 ಇಷ್ಟು ವರ್ಷ ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಇದೀಗ ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ ಸತ್ಯವನ್ನು ರಿವೀಲ್ ಮಾಡಿದ್ದಾರೆ. ‘ನನ್ನಿಂದ ಎಷ್ಟೋ ಜನಕ್ಕೆ ತೊಂದರೆ ಆಗಿದೆ, ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು. ‘ಇಂಜಿನಿಯರಿಂಗ್ ಮುಗಿಸಿ, ಅಸಿಸ್ಟಂಟ್ ಡೈರೆಕ್ಟರ್ ಆದ ನಂತರ ದರ್ಶನ್ ಅವರ ಮ್ಯಾನೇಜರ್ ಆಗಿ ಕೆಲಸ ಮಾಡಿದೆ. ಮೊದಲ ಸಲ ಸಿನಿಮಾ ಮಾಡಿದಾಗ ಅಂದುಕೊಂಡ ರೀತಿಯಲ್ಲಿ ಕೈ ಹಿಡಿಯಲಿಲ್ಲ. ಸಿನಿಮಾ ನಿರ್ಮಾಣ ಮಾಡಿದೆ, ಡಿಸ್ಟ್ರಿಬ್ಯೂಷನ್ ಮಾಡಿದೆ, ಹೋಟೆಲ್ ಬಿಸ್ನೆಸ್ ಮಾಡಿದೆ. ಯಾವುದೂ ಕೈ ಹಿಡಿಯಲಿಲ್ಲ’ ಎಂದು ಮಲ್ಲಿಕಾರ್ಜುನ ಹೇಳಿದರು. ನಂತರ ಅವರು ಹಲವು ವಿಷಯದಲ್ಲಿ ಮಲ್ಲಿಕಾರ್ಜುನ ಕೈ ಸುಟ್ಟುಕೊಂಡರು. ಅವರು ಮೈತುಂಬ ಸಾಲ ಮಾಡಿಕೊಂಡರು. ನಂತರ ಸಾಯುವ ನಿರ್ಧಾರಕ್ಕೂ ಬಂದರು. ಆದರೆ, ಸಾಯುವ ನಿರ್ಧಾರದಿಂದ ಅವರು ಹಿಂದೆ ಸರಿದರು. ‘ಅಂದು ಕುಂದಾಪರದಿಂದ ಹೊರಟೆ. ಸವದತ್ತಿಗೆ ಬಂದೆ. ನನ್ನ ಗೆಳೆಯನ ಬಳಿ ಹಣ ಪಡೆದೆ. ಕೊಲ್ಲಾಪುರ, ಸೊಲ್ಲಾಪುರ, ಉತ್ತರ ಭಾರತ ಸೇರಿದಂತೆ ಅನೇಕ ಕಡೆ ಸುತ್ತಾಡಿದೆ. ಹಲವು ಜಾಗದಲ್ಲಿ ಕೆಲವು ದಿನ ಇರ್ತಿದ್ದೆ, ಬಿಟ್ಟು ಹೋಗ್ತಿದ್ದೆ. ಹೋಟೆಲ್, ರೆಸಾರ್ಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಕೆಲಸ ಮಾಡಿದೆ’ ಎಂದು ಅವರು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.