2026-03-07 06:38:29

Former Minister A Narayanaswamy | ಮಾದಿಗ ಉಪ ಜಾತಿಗಳಿಗೆ ಅನ್ಯಾಯ:ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎ ನಾರಾಯಣಸ್ವಾಮಿ ಆರೋಪ | Speed News Kannada

Former Minister A Narayanaswamy | ಮಾದಿಗ ಉಪ ಜಾತಿಗಳಿಗೆ ಅನ್ಯಾಯ:ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎ ನಾರಾಯಣಸ್ವಾಮಿ ಆರೋಪ | Speed News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಮಾದಿಗ ಉಪ ಜಾತಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಕೇಂದ್ರ ಮಾಜಿ ಸಚಿವ ಎ. ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಈ ಮೀಸಲಾತಿ, ಒಳ ಮೀಸಲಾತಿ ಮತ್ತಿತರ ವಿಷಯಗಳನ್ನು ಕುರಿತು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿತು. ನಿಯೋಗದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದುರ್ಯೋಧನ ಐಹೊಳೆ, ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್, ನಿವೃತ್ತ ಐ.ಎ.ಎಸ್ ಅಧಿಕಾರಿ ಲಕ್ಷ್ಮೀನಾರಾಯಣ್ ಅವರು ಉಪಸ್ಥಿತರಿದ್ದರು.
ನಂತರ ಮಾತನಾಡಿದ ಅವರು,  ಶೋಷಿತರಲ್ಲಿ ಶೋಷಿತರಾಗಿರುವ, 78 ವರ್ಷಗಳಲ್ಲಿ ರಾಜ್ಯ, ಕೇಂದ್ರದ ಯೋಜನೆಗಳ ಲಾಭ  ಇಲ್ಲದೆ ಸೊರಗಿದ ಸಮಾಜಗಳಿಗೆ ವಿಶೇಷ ಮೀಸಲಾತಿ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ರಾಜ್ಯದಲ್ಲಿ ಸರಕಾರವು ನ್ಯಾ.ನಾಗಮೋಹನ್‍ದಾಸ್ ವರದಿಯನ್ನು ಜಾರಿ ಮಾಡಬೇಕಿತ್ತು. ಅದನ್ನು ತಿರಸ್ಕರಿಸುವ ಮೂಲಕ ಸರ್ಕಾರ ಅನ್ಯಾಯ ಎಸಗುತ್ತಿದೆ ಎಂದು ಆಪಾದಿಸಿದರು.
ರಾಜ್ಯದ ಎಲ್ಲ ನಿಗಮಗಳೂ ಸೊರಗಿವೆ:
ಗ್ಯಾರಂಟಿಗೆ ಎಸ್‍ಸಿ, ಎಸ್‍ಟಿ ಹಣ ಬಳಸುತ್ತಿದ್ದಾರೆ. ರಾಜ್ಯದ ಎಲ್ಲ ನಿಗಮಗಳೂ ಸೊರಗಿದ್ದು, ಅವುಗಳಿಗೆ ಬಾಗಿಲು ಹಾಕಿದ್ದಾರೆ. ಕೇವಲ ಶಿಕ್ಷಣ, ಉದ್ಯೋಗವಲ್ಲ; ರೋಸ್ಟರ್‌ ಅನ್ನೂ ಜಾರಿ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.