2026-04-24 02:54:12

Four killed as truck loaded with garlic | ಬೈಕ್‌,ಕಾರು,ಬಸ್‌ಗೆ ಬೆಳ್ಳುಳ್ಳಿ ತುಂಬಿದ ಲಾರಿ ಡಿಕ್ಕಿ, ನಾಲ್ವರು ದುರ್ಮರಣ | Speed news kannada

Four killed as truck loaded with garlic | ಬೈಕ್‌,ಕಾರು,ಬಸ್‌ಗೆ ಬೆಳ್ಳುಳ್ಳಿ ತುಂಬಿದ ಲಾರಿ ಡಿಕ್ಕಿ, ನಾಲ್ವರು ದುರ್ಮರಣ | Speed news kannada

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐದಾರು ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ  ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಳ್ಳುಳ್ಳಿ ಸಾಗಾಟ ಮಾಡುತ್ತಿದ್ದ ಲಾರಿ ಹೊಸಪೇಟೆ ಹೊರವಲಯದ ಟನಲ್‌ನಿಂದ ಡಣಾಪುರದವರೆಗೆ ಬೈಕ್, ಕಾರು ಹಾಗೂ ಬಸ್‌ಗೆ ಹೊಡೆದುಕೊಂಡು ಹೋಗಿದೆ. ಸದ್ಯಕ್ಕೆ ನಾಲ್ಕು ಜನರು ಸಾವನ್ನಪ್ಪಿರೋದರ ಕುರಿತು ಮಾಹಿತಿ ಲಭಿಸಿದೆ. ಅಪಘಾತದ ರಭಸಕ್ಕೆ ಒಂದು ಕಾರು ಅಪ್ಪಚ್ಚಿಯಾಗಿದೆ. ಘಟನಾ ಸ್ಥಳಕ್ಕೆ ವಿಜಯನಗರ ಎಸ್ಪಿ ಜಾಹ್ನವಿ ಎಸ್ ಹಾಗೂ ಮರಿಯಮ್ಮನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲವರಿಗೂ ಗಾಯಗಳಾಗಿವೆ. ಗಾಯಾಳುಗಳೆಲ್ಲರನ್ನೂ ಹೊಸಪೇಟೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.